Guarantee Scheme: ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ? ಡಿಕೆ ಶಿವಕುಮಾರ್ ಸ್ಪಷ್ಟಣೆ!

Guarantee Scheme: ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ? ಡಿಕೆ ಶಿವಕುಮಾರ್ ಸ್ಪಷ್ಟಣೆ!

ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, ರಾಜ್ಯದ ಡಿಸಿಎಂ, ಆಗಿರುವ ಡಿಕೆ ಶಿವಕುಮಾರ್ ಅವರು “ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ಯಾವುದೇ ಆರ್ಥಿಕ ಸಂಕಷ್ಟ ಎದುರಾಗಿಲ್ಲ”  ಎಂದು ಸ್ಪಷ್ಟ ಪಡಿಸಿದರು.

ರಾಜ್ಯದ ಗಣ್ಯರಾದ ಬಸವರಾಜ್ ರಾಯರೆಡ್ಡಿ ಅವರು, ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ಎದುರಾಗಿದೆ, ಎಂದು ಹೇಳಿಕೆ ನೀಡಿದಾಗ ಮಾಧ್ಯಮಗಳು ಕೆಪಿಸಿಸಿ ಕಚೇರಿ ಎದುರು ಬಂದಾಗ ಡಿಕೆ ಶಿವಕುಮಾರ್ ಅವರು ಈ ರೀತಿಯ ಮಾಹಿತಿಯನ್ನು ನೀಡಿದ್ದಾರೆ.

WhatsApp Group Join Now
Telegram Group Join Now

ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಡಿಕೆ ಶಿವಕುಮಾರ್ ಅವರು ಈ ರೀತಿಯಾದ ಹೇಳಿಕೆಯನ್ನು ನೀಡಿದ್ದಾರೆ, “ರಾಜ್ಯ ಸರ್ಕಾರಕ್ಕೆ ಯಾವುದೇ ಆರ್ಥಿಕ ಸಂಕಷ್ಟ ಎದುರಾಗಿಲ್ಲ” ನಾವು ಕೊಟ್ಟ ಮಾತುಗಳನ್ನು ಉಳಿಸಿಕೊಂಡಿದ್ದೇವೆ ಗ್ಯಾರಂಟಿ ಯೋಜನೆಗಳು ಏನನ್ನು ಮುಳುಗಿಸಿಲ್ಲ. ಕಳೆದ ಬಾರಿ ಮುಖ್ಯಮಂತ್ರಿ ಆಗಿರುವ, ಬೊಮ್ಮಾಯಿ ಅವರ ಮಂಡಿಸಿದ ಬಜೆಟ್(Budget) ಅನ್ನು ನಾವು ಪುನರ್ ಪರಿಶೀಲಿಸಿ, ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೆವು.

ಗ್ಯಾರಂಟಿ ಯೋಜನೆಗಳಿಗೆ, ಈ ಬಾರಿ ನಡೆಯುವ ಬಜೆಟ್ ನಲ್ಲಿ 50,000 ಕೋಟಿಗೂ ಹೆಚ್ಚು ಹಣ ಮೀಸಲಿಟ್ಟಿದ್ದೇವೆ. ನಾವು ಗ್ಯಾರಂಟಿ ಯೋಜನೆಗಳನ್ನು ಮತಕ್ಕಾಗಿ ಮಾಡಿಲ್ಲ, ಜನರ ಬದುಕಿನಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ ಈ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಬೆಲೆ ಏರಿಕೆಯಿಂದ ಜನರಿಗೆ ತೊಂದರೆಯಾಗುತ್ತಿದೆ, ಮುಂದಿನ ದಿನಗಳಲ್ಲಿ “ಜನ ನಮಗೆ ಸ್ಪಂದಿಸಲಿದ್ದಾರೆ” ಎಂದು, ಕೆಪಿಸಿಸಿ ಕಛೇರಿಯಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಈ ರೀತಿಯ ಮಾಹಿತಿಯನ್ನು ಪ್ರತಿಕ್ರಿಯಿಸಿದ್ದಾರೆ.

ಮುಂದಿನ ದಿನಗಳಲ್ಲಿ ಗ್ಯಾರಂಟಿ ಯೋಜನೆಗಳು(Guarantee Scheme) ಯಾವ ಹಂತ ತಲುಪುತ್ತದೆ ಎನ್ನುವ ಮಾಹಿತಿಯನ್ನು ತಿಳಿದುಕೊಳ್ಳಲು ನಮ್ಮ ಗ್ರೂಪ್ ಸೇರಿಕೊಳ್ಳಿ, ಸೇರಲು ಇಲ್ಲಿ ಕ್ಲಿಕ್ ಮಾಡಿ.

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು,ಹಾಗೂ ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ಕನ್ನಡ needs WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿ
WhatsApp Group Join Now
Telegram Group Join Now

Leave a Comment