INDIAN RAILWAY RECRUITMENT|ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 1791 ಹುದ್ದೆಗಳ ನೇಮಕಾತಿ
ರೈಲ್ವೆ ಇಲಾಖೆಯ ನಾರ್ಥ್ ವೆಸ್ಟರ್ನ್ ರೈಲ್ವೆ ಯಲ್ಲಿ ಅಪ್ರೆಂಟಿಸ್ ಹುದ್ದೆಗಳು ಖಾಲಿ ಇದ್ದು ನೇಮಕಾತಿಯಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಅವ್ಹಾನ ಮಾಡಲಾಗಿದೆ, ಆಸಕ್ತಿ ಇರುವ ಅರ್ಹಬ್ಯಾದಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.
ನಾರ್ಥ್ ವೆಸ್ಟರ್ನ್ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದ ಹಾಗೆ ಅಧಿಕೃತ ಅಧಿಸೂಚನೆಯು ಈಗಾಗಲೇ ಬಿಡುಗಡೆಯಾಗಿದೆ, ಅಧಿಸೂಚನೆಯ ಪ್ರಕಾರ ಶೈಕ್ಷಣಿಕ ಅರ್ಹತೆ, ವಯೋಮಾನ ಪ್ರಕ್ರಿಯೆ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗುತ್ತದೆ, ಅಭ್ಯರ್ಥಿಗಳು ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಅರ್ಥೈಸಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ.
ಹುದ್ದೆಗಳಿಗೆ ಸಂಬಂಧಿಸಿದ ವಿವರಗಳು
ಇಲಾಖೆಯ ಹೆಸರು | ನಾರ್ಥ್ ವೆಸ್ಟರ್ನ್ ರೈಲ್ವೆ |
ಹುದ್ದೆಯ ಹೆಸರು | ಅಪ್ರೆಂಟಿಸ್ ಹುದ್ದೆಗಳು |
ಖಾಲಿ ಇರುವ ಹುದ್ದೆಗಳು | 1791 |
ಉದ್ಯೋಗ ಸ್ಥಳ | ಭಾರತದಾದ್ಯಂತ |
ವೇತನ ಶ್ರೇಣಿ | ಅಧಿಸೂಚನೆಯ ಪ್ರಕಾರ |
ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ |
ಶೈಕ್ಷಣಿಕ ಅರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆಯ ಪ್ರಕಾರ ಮಾನ್ಯತೆ ಪಡೆದ ಸಂಸ್ಥೆಯಿಂದ ಅಥವಾ ವಿಶ್ವವಿದ್ಯಾಲಯದಿಂದ, SSLC ಅಥವಾ ತತ್ಸಮಾನ ವಿದ್ಯಾರ್ಥಿಯಲ್ಲಿ ಶೇಕಡಾ 50% ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು ಹಾಗೂ ಹುದ್ದೆಗಳಿಗೆ ಸಂಬಂಧಿಸಿದ ITI ಪದವಿಯನ್ನು ಪಡೆದಿರಬೇಕು.
ವಯೋಮಾನ ಪ್ರಕ್ರಿಯೆ: ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು, ಅರ್ಜಿ ಸಲ್ಲಿಸುವ ದಿನಾಂಕವಾದ 10 ಡಿಸೆಂಬರ್ 2024ಕ್ಕೆ ಕನಿಷ್ಠ 15 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠವಾಗಿ 24 ವರ್ಷ ವಯೋಮಿತಿಯನ್ನು ಮೀರಿರಬಾರದು.
ಪ್ರವರ್ಗದ ಆಧಾರದ ಮೇಲೆ ವಯಸ್ಸಿನ ಸಡಿಲಿಕೆ;
- SC, ST ಅಭ್ಯರ್ಥಿಗಳಿಗೆ 05 ವರ್ಷ,
- OBC ಅಭ್ಯರ್ಥಿಗಳಿಗೆ 03 ವರ್ಷ,
- PWD ಅಭ್ಯರ್ಥಿಗಳಿಗೆ 10 ವರ್ಷಗಳ ಕಾಲ ವಯಸ್ಸಿನ ಸಡಿಲಿಕೆಯನ್ನು ಮಾಡಲಾಗಿದೆ.
ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು, ಅಧಿಸೂಚನೆಯ ಪ್ರಕಾರ, ತಮ್ಮ ಪ್ರವರ್ಗದ ಆಧಾರದ ಮೇಲೆ ಅರ್ಜಿ ಶುಲ್ಕವನ್ನು ಪಾವತಿಸಬೇಕು.
- ಎಲ್ಲಾ ಸಾಮಾನ್ಯ ಅಭ್ಯರ್ಥಿಗಳು ರೂ.100/-
- SC/ST / ಮಹಿಳಾ/ PWD ಅಭ್ಯರ್ಥಿಗಳಿಗೆ ಶುಲ್ಕದ ವಿನಾಯಿತಿ ಮಾಡಲಾಗಿದೆ,
- ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಆನ್ಲೈನ್ ಮುಖಾಂತರ ಪಾವತಿಸಬೇಕು.
ಅರ್ಜಿ ಸಲ್ಲಿಸುವಿಕೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭವಾದ ದಿನಾಂಕ | 10 ನವೆಂಬರ್ 2024 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 10 ಡಿಸೆಂಬರ್ 2024 |
ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೆಳಗೆ ನೀಡಿರುವ ಎಲ್ಲಾ ಸೂಚನೆಗಳನ್ನು ಪಾಲಿಸುವ ಮುಖಾಂತರ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು ವಿವರಗಳು ಕೆಳಗಿನಂತಿವೆ;
- ಅಭ್ಯರ್ಥಿಯು ಅರ್ಜಿ ಸಲ್ಲಿಸುವ ಮೊದಲು, ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿ ಅರ್ಥೈಸಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವುದು ಒಳ್ಳೆಯದು.
- ಅರ್ಜಿ ಸಲ್ಲಿಸುವ ದಿನಾಂಕ 10 ನವೆಂಬರ್ 2024 ರಿಂದ ಆರಂಭವಾಗಿ 10 ಡಿಸೆಂಬರ್ 2024 ವರೆಗೆ ಚಾಲ್ತಿಯಲ್ಲಿ ಇರುತ್ತದೆ.
- ಅಭ್ಯರ್ಥಿಗಳು ಅರ್ಜಿಯನ್ನು ಕೊನೆಯ ದಿನಾಂಕದ ಒಳಗೆ ಸಲ್ಲಿಸಬೇಕು ನಂತರ ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.
- ಅಭ್ಯರ್ಥಿ ಅರ್ಜಿ ಸಲ್ಲಿಸುವಾಗ ಅಧಿಕೃತ ಲಿಂಕ್ ಇಲ್ಲವೇ ಕೆಳಗಡೆ ನೀಡಿರುವ ಅರ್ಜಿ ಸಲ್ಲಿಸುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ನಂತರ ಅಧಿಕೃತ ಪೇಜ್ ತೆರೆದುಕೊಳ್ಳುತ್ತದೆ.
- ಪೇಜ್ ನ ಅರ್ಜಿ ನಮೂನೆಯಲ್ಲಿ ಕೇಳಲಾಗುವ ಎಲ್ಲ ದಾಖಲಾತಿಗಳನ್ನು ಸರಿಪಡಿಸಿಕೊಂಡು ಇಟ್ಟುಕೊಳ್ಳಬೇಕು.
- ಅರ್ಜಿ ಸಲ್ಲಿಸುವಾಗ ಸರಿಪಡಿಸಿಕೊಂಡ ಎಲ್ಲಾ ದಾಖಲಾತಿಗಳನ್ನು ಭರ್ತಿ ಮಾಡಿ.
- ಭರ್ತಿ ಮಾಡಿದ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
- ದಾಖಲಾತಿಗಳ ಜೊತೆಗೆ ಅಭ್ಯರ್ಥಿಯ ಸಹಿ, ಭಾವಚಿತ್ರ, ಹೆಬ್ಬೆರಳಿನ THUMB ಅನ್ನು ಕೂಡ ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು(ಅಗತ್ಯವಿದ್ದರೆ ಮಾತ್ರ)
- ಎಲ್ಲಾ ದಾಖಲೆಗಳನ್ನು ಭರ್ತಿ ಮಾಡಿದ ನಂತರ ಅರ್ಜಿನ ನಮೂನೆಯನ್ನು ಒಮ್ಮೆ ಪರಿಶೀಲಿಸಿ ಏನಾದರೂ ತಪ್ಪಿದ್ದಲ್ಲಿ ಸರಿಪಡಿಸಿ.
- ಕೊನೆಯಲ್ಲಿ ಸಲ್ಲಿಸು ಬಟನ್ ಮೇಲೆ ಕ್ಲಿಕ್ ಮಾಡುವ ಮುಖಾಂತರ ನಿಮ್ಮ ಅರ್ಜಿ ನಮೂನೆಯನ್ನು ಪೂರ್ಣಗೊಳಿಸಬಹುದು.
- ಅಭ್ಯರ್ಥಿ ಅರ್ಜಿಯನ್ನು 10 ಡಿಸೆಂಬರ್ 2024ರ ಒಳಗೆ ಸಲ್ಲಿಸಬೇಕು ನಂತರ ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.
ಭರ್ತಿ ಮಾಡಿದ ಅರ್ಜಿಯ ಪ್ರತಿಯನ್ನು ಡೌನ್ಲೋಡ್ ಮಾಡಿಕೊಂಡು ಇಟ್ಟುಕೊಳ್ಳಿ. ಪರೀಕ್ಷೆಯ ಸಮಯದಲ್ಲಿ ಅದು ಸಹಾಯವಾಗುತ್ತದೆ.
ಆಯ್ಕೆಯ ವಿಧಾನ: ನಾರ್ಥ್ ವೆಸ್ಟರ್ನ್ ರೈಲ್ವೆ ಹೊರಡಿಸಿದ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ, ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ, ನಂತರ ಅರ್ಹ ಅಭ್ಯರ್ಥಿಗಳ ದಾಖಲೆಗಳನ್ನು ಪರಿಶೀಲನೆ ಮಾಡುವ ಮುಖಾಂತರ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ವೇತನ ಶ್ರೇಣಿ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅಧಿಸೂಚನೆಯ ಪ್ರಕಾರ, ನಿಯಮಾನುಸಾರವಾಗಿ ವೇತನವನ್ನು ನೀಡಲಾಗುತ್ತದೆ.
ಪ್ರಮುಖ ಲಿಂಕುಗಳು:
ಅಧಿಕೃತ ವೆಬ್ಸೈಟ್ | rrcjaipur.in |
ಅರ್ಜಿ ಸಲ್ಲಿಸುವ ಲಿಂಕ್ | APPLY NOW |
ಅಧಿಕೃತ ಅಧಿಸೂಚನೆ | Download Now |