BSF AIR WING AND ENGINEERING RECRUITMENT 2024:
ಕನ್ನಡ ನೀಡ್ಸ್ ಓದುಗರಿಗೆ ಎಲ್ಲರಿಗೂ ನಮಸ್ಕಾರ, ಇಂದಿನ ವರದಿಯ ಮುಖ್ಯಾಂಶವೇನೆಂದರೆ, ಭಾರತೀಯ ಗಡಿ ಭದ್ರತಾ ಪಡೆಯಲ್ಲಿ (BSF) ಖಾಲಿ ಇರುವ ಏರ್ ವಿಂಗ್ ಹುದ್ದೆಗಳಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆಯನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ, ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಪ್ರತಿದಿನ ನಮ್ಮ ವಾಹಿನಿಯಲ್ಲಿ ಪ್ರಸಾರವಾಗುವ ಇದೇ ತರಹದ ಉಚಿತ ಉದ್ಯೋಗದ ಮಾಹಿತಿಗಳನ್ನು ಪಡೆಯಲು ನಮ್ಮ ಟೆಲಿಗ್ರಾಂ ಗ್ರೂಪ್ ಸೇರಿಕೊಳ್ಳಿ, ಸೇರಲು ಇಲ್ಲಿ ಕ್ಲಿಕ್ ಮಾಡಿ.
ಭಾರತೀಯ ಗಡಿ ಭದ್ರತಾ ಪಡೆಯಲ್ಲಿನ (BSF) ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದ ಅಧಿಕೃತ ಸೂಚನೆಯೂ ಈಗಾಗಲೇ ಬಿಡುಗಡೆಯಾಗಿದೆ, ಈ ಹುದ್ದೆಗಳ ಬಗ್ಗೆ ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ಅರ್ಥೈಸಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವುದು ಒಳ್ಳೆಯದು.
ಈ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವೇತನ ಶ್ರೇಣಿ, ವಯೋಮಾನ ಪ್ರಕ್ರಿಯೆ, ಅರ್ಜಿ ಶುಲ್ಕದ ವಿವರ, ಅರ್ಜಿ ಸಲ್ಲಿಸುವಿಕಿಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು, ಆಯ್ಕೆಯ ವಿಧಾನ ಹಾಗೂ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಗಳನ್ನು ಈ ಲೇಖನದಲ್ಲಿ ವಿವರಿಸಲಾಗುತ್ತದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಮಾಹಿತಿಯನ್ನು ಸರಿಯಾಗಿ ಓದಿ ಅರ್ಥೈಸಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ.
ಹುದ್ದೆಗಳಿಗೆ ಸಂಬಂಧಿಸಿದ ವಿವರಗಳು:
- ಇಲಾಖೆಯ ಹೆಸರು: ಗಡಿ ಭದ್ರತಾ ಪಡೆ (BSF)
- ಖಾಲಿ ಇರುವ ಹುದ್ದೆಗಳು: 82
- ಹುದ್ದೆಯ ಹೆಸರು: ವಿಂಗ್ ಏರ್ ಹುದ್ದೆಗಳು
- ಕರ್ತವ್ಯ ಸ್ಥಳ: ಭಾರತದಾದ್ಯಂತ
- ವೇತನ ಶ್ರೇಣಿ: ಅಧಿಸೂಚನೆಯ ಪ್ರಕಾರ
- ಅರ್ಜಿ ಸಲ್ಲಿಸುವ ಬಗೆ: ಆನ್ಲೈನ್ ಮುಖಾಂತರ
ಖಾಲಿ ಇರುವ ಹುದ್ದೆಗಳು:
ಗಡಿ ಭದ್ರತಾ ಪಡೆಯು ಹೊರಡಿಸಿದ ಅಧಿಕೃತ ಅಧಿಸೂಚನೆ ಪ್ರಕಾರ ಒಟ್ಟು 82 ವಿಂಗ್ ಆಫೀಸರ್ ಹುದ್ದೆಗಳು ಖಾಲಿ ಇವೆ. ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಶೈಕ್ಷಣಿಕ ಅರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ ಆಧಾರದ ಮೇಲೆ, ಮಾನ್ಯತೆ ಪಡೆದ ಸಂಸ್ಥೆಯಿಂದ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿಯಲ್ಲಿ ತೇರ್ಗಡೆ ಹೊಂದಿರಬೇಕು, ಜೊತೆಗೆ ಐಟಿಐ ಕೋರ್ಸ್ ಅನ್ನು ಕೂಡ ಪೂರ್ಣಗೊಳಿಸಿರಬೇಕು.
ವಯೋಮಾನ ಪ್ರಕ್ರಿಯೆ:
ಗಡಿ ಭದ್ರತಾ ಪಡೆಯ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಗರಿಷ್ಠವಾಗಿ 30 ವರ್ಷ ವಯೋಮಿತಿಯನ್ನು ಮೀರಿರಬಾರದು.
ಪ್ರವರ್ಗದ ಆಧಾರದ ಮೇಲೆ ವಯಸ್ಸಿನ ಸಡಿಲಿಕೆಯನ್ನು ಮಾಡಲಾಗಿದೆ.
- ಒಬಿಸಿ (OBC )ಅಭ್ಯರ್ಥಿಗಳಿಗೆ 03 ವರ್ಷಗಳ ಕಾಲ,
- ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 05 ವರ್ಷಗಳ ಕಾಲ ವಯಸ್ಸಿನ ಸಡಿಲಿಕೆಯನ್ನು ಮಾಡಲಾಗಿದೆ.
ಅರ್ಜಿ ಶುಲ್ಕದ ವಿವರಗಳು:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತಮ್ಮ ಪ್ರವರ್ಗದ ಆಧಾರದ ಮೇಲೆ ಅರ್ಜಿ ಶುಲ್ಕವನ್ನು ಪಾವತಿಸಬೇಕು, ಹೆಚ್ಚಿನ ಮಾಹಿತಿಯು ಕೆಳಗಿನಂತಿವೆ.
- ಸಾಮಾನ್ಯ OBC /EWS ಅಭ್ಯರ್ಥಿಗಳು ರೂಪಾಯಿ.100 ಅರ್ಜಿ ಶುಲ್ಕವನ್ನು ಪಾವತಿಸಬೇಕು.
- ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಶುಲ್ಕದ ವಿನಾಯಿತಿಯನ್ನು ಮಾಡಲಾಗಿದೆ.
ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಆನ್ಲೈನ್ ಮುಖಾಂತರ ಪಾವತಿಸಬೇಕು, ಅರ್ಜಿ ಶುಲ್ಕ ಪಾವತಿಸುವ ಹಂತಗಳು ಕೆಳಗಿನಂತಿವೆ:
- ಯುಪಿಐ (UPI)
- ನೆಟ್ ಬ್ಯಾಂಕಿಂಗ್ (NET BANKING)
- ಕ್ರೆಡಿಟ್ ಕಾರ್ಡ್ (CREDIT CARD)
- ಡೆಬಿಟ್ ಕಾರ್ಡ್ ( DEBIT CARD)
ಮೇಲಿನ ಯಾವುದೇ ಹಂತಗಳ ಮೂಲಕ ನೀವು ಅರ್ಜಿ ಶುಲ್ಕವನ್ನು ಪಾವತಿಸಬಹುದು.
ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೆಳಗಡೆ ನೀಡಲಾದ ಸೂಚನೆಗಳನ್ನು ಸರಿಯಾಗಿ ಪಾಲಿಸುವ ಮುಖಾಂತರ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು, ಮಾಹಿತಿಗಳು ಕೆಳಗಿನಂತಿವೆ.
- ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿ ಅರ್ಥೈಸಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವುದು ಒಳ್ಳೆಯದು.
- ಅರ್ಜಿ ಸಲ್ಲಿಸುವ ದಿನಾಂಕ 16 ಮಾರ್ಚ್ 2024 ರಿಂದ ಆರಂಭವಾಗಿ 15 ಏಪ್ರಿಲ್ 2024 ರವರೆಗೆ ಚಾಲ್ತಿಯಲ್ಲಿ ಇರುತ್ತದೆ.
- ಅಭ್ಯರ್ಥಿಗಳು ಅರ್ಜಿಯನ್ನು ನಿಗದಿಪಡಿಸಿದ ದಿನಾಂಕದೊಳಗೆ ಸಲ್ಲಿಸಬೇಕು ನಂತರ ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.
- ಅರ್ಜಿ ಸಲ್ಲಿಸುವಾಗ ಅಧಿಕೃತ ವೆಬ್ಸೈಟ್ ಇಲ್ಲವೇ ಅರ್ಜಿ ಸಲ್ಲಿಸುವ ಲಿಂಕ್ ಮೇಲೆ ಕ್ಲಿಕ್ ಮಾಡುವ ಮುಖಾಂತರ, ಅಧಿಕೃತ ಪೇಜ್ ಗೆ ಭೇಟಿ ನೀಡಬೇಕು.
- ನಂತರ ಅಧಿಕೃತ ಪೇಜ್ ನ ಅರ್ಜಿ ನಮೂನೆಯಲ್ಲಿ ಕೇಳಲಾಗುವ ಎಲ್ಲಾ ದಾಖಲಾತಿಗಳನ್ನು ಸರಿಪಡಿಸಿಕೊಂಡು ಇಟ್ಟುಕೊಳ್ಳಬೇಕು.
- ನಂತರ ಅರ್ಜಿ ಸಲ್ಲಿಸುವಾಗ ಸರಿಪಡಿಸಿಕೊಂಡ ಎಲ್ಲ ದಾಖಲಾತಿಗಳನ್ನು ಭರ್ತಿ ಮಾಡಿ.
- ಭರ್ತಿ ಮಾಡಿದ ಎಲ್ಲ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
- ದಾಖಲಾತಿಗಳ ಜೊತೆಗೆ ಅಭ್ಯರ್ಥಿಯ ಸಹಿ ಭಾವಚಿತ್ರ ಹೆಬ್ಬೆರಳಿನ Thumb ಅನ್ನು ಕೂಡ ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
- ಎಲ್ಲಾ ದಾಖಲಾತಿಗಳನ್ನು ಭರ್ತಿ ಮಾಡಿದ ನಂತರ ಅರ್ಜಿ ನಮೂನೆಯನ್ನು ಪುನಃ ಪರಿಶೀಲಿಸಿ, ಏನಾದರೂ ತಪ್ಪಿದ್ದಲ್ಲಿ ಸರಿಪಡಿಸಬೇಕು.
- ನಂತರ ನಿಮ್ಮ ಪ್ರವರ್ಗದ ಆಧಾರದ ಮೇಲೆ ಅರ್ಜಿ ಶುಲ್ಕವನ್ನು ಪಾವತಿಸಿ ಅಗತ್ಯವಿದ್ದರೆ ಮಾತ್ರ.
- ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿದ ನಂತರ, ಕೊನೆಯಲ್ಲಿ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡುವ ಮುಖಾಂತರ ಅರ್ಜಿ ನಮೂನೆಯನ್ನು ಪೂರ್ಣಗೊಳಿಸಬಹುದು.
- ಅಭ್ಯರ್ಥಿಯು ಅರ್ಜಿಯನ್ನು 15 ಏಪ್ರಿಲ್ 2024 ರ ಒಳಗೆ ಸಲ್ಲಿಸಬೇಕು ನಂತರ ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.
- ನಂತರ ಭರ್ತಿ ಮಾಡಿದ ಅರ್ಜಿಯ ಪ್ರತಿಯನ್ನು ಡೌನ್ಲೋಡ್ ಮಾಡಿಕೊಂಡು ಇಟ್ಟುಕೊಳ್ಳಬೇಕು.
- ಪರೀಕ್ಷೆ ಸಮಯದಲ್ಲಿ ಡೌನ್ಲೋಡ್ ಮಾಡಿಕೊಂಡ ಅರ್ಜಿಯ ಪ್ರತಿಯು ಅಗತ್ಯವಿರುತ್ತದೆ.
ಅಭ್ಯರ್ಥಿಯು ಮೇಲಿನ ಎಲ್ಲಾ ಸೂಚನೆಗಳನ್ನು ಸರಿಯಾಗಿ ಪಾಲಿಸುವ ಮುಖಾಂತರ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸುವಿಕೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಸಲು ಪ್ರಾರಂಭವಾಗುವ ದಿನಾಂಕ: 16 ಮಾರ್ಚ್ 2024
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15 ಏಪ್ರಿಲ್ 2024
ಆತ್ಮೀಯ ಸ್ಪರ್ಧಾರ್ಥಿಗಳೇ, ನೀವೇನಾದರೂ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಯಸಿದರೆ ಈಗಿನಿಂದಲೇ ಸರಿಯಾದ ಅಧ್ಯಯನವನ್ನು ನಡೆಸುವುದು ಒಳ್ಳೆಯದು, ಏಕೆಂದರೆ ಪರೀಕ್ಷೆಯ ಸಮಯದಲ್ಲಿ ಹೆಚ್ಚಿನ ಅಂಕಗಳನ್ನು ಪಡೆದುಕೊಂಡು ಹುದ್ದೆಗಳನ್ನು ಪಡೆಯಲು ಸಹಾಯವಾಗುತ್ತದೆ. ಇಲ್ಲದಿದ್ದಲ್ಲಿ ನೀವು ಸಲ್ಲಿಸಿದ ಅರ್ಜಿ ನಮೂನೆಗೆ ಯಾವುದೇ ಮೌಲ್ಯ ಇಲ್ಲದಂತಾಗುತ್ತದೆ, ಆದ್ದರಿಂದ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಎಲ್ಲಾ ಅಭ್ಯರ್ಥಿಗಳು ಸರಿಯಾಗಿ ಅಧ್ಯಯನವನ್ನು ನಡೆಸಿ ಪರೀಕ್ಷಾ ಕೇಂದ್ರಕ್ಕೆ ತೆರಳಿ ಅಂಕಗಳನ್ನು ಪಡೆದುಕೊಳ್ಳಿ.
ಆಯ್ಕೆಯ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಎಲ್ಲಾ ಅಭ್ಯರ್ಥಿಗಳಿಗೆ ಮೊದಲು ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ, ನಂತರ ಅವರು ಸಲ್ಲಿಸಿದ ಎಲ್ಲಾ ದಾಖಲಾತಿಗಳನ್ನು ಪರಿಶೀಲನೆ ಮಾಡಲಾಗುತ್ತದೆ. ಎರಡರಲ್ಲೂ ಮೆರಿಟ್ ಹೊಂದಿದ ಅಭ್ಯರ್ಥಿಗಳಿಗೆ ವೈದ್ಯಕೀಯ ಪರೀಕ್ಷೆಯನ್ನು ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ವೇತನ ಶ್ರೇಣಿ:
ಗಡಿ ಭದ್ರತಾ ಪಡೆಯು ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ರೂಪಾಯಿ 21,700 ರಿಂದ 92,300 ರವರೆಗೆ ವೇತನವನ್ನು ನೀಡಲಾಗುತ್ತದೆ.
ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ಲಿಂಕ್ ಗಳು:
- ಅಧಿಕೃತ ವೆಬ್ಸೈಟ್: rectt.bsf.gov.in
- ಅರ್ಜಿ ಸಲ್ಲಿಸುವ ಲಿಂಕ್: ಇಲ್ಲಿ ಕ್ಲಿಕ್ ಮಾಡಿ.
- ಅಧಿಕೃತ ಅಧಿಸೂಚನೆ: ಡೌನ್ಲೋಡ್ ಮಾಡಿಕೊಳ್ಳಿ
ಉತ್ತಮ ಮಾಹಿತಿಯನ್ನು ಹೊಂದಿದ ಲೇಖನವನ್ನು ನಿಮ್ಮ ಸ್ನೇಹಿತರಿಗೆ, ಬಂಧುಗಳಿಗೆ ಹಾಗೂ ಅಗತ್ಯವಿರುವ ಎಲ್ಲರಿಗೂ ಶೇರ್ ಮಾಡಿ. ಲೇಖನವನ್ನು ಓದಿದ ಎಲ್ಲರಿಗೂ ಧನ್ಯವಾದಗಳು.
ಪ್ರತಿದಿನ ನಮ್ಮ ಜಾಲತಾಣದಲ್ಲಿ ಪ್ರಸಾರವಾಗುವ ಎಲ್ಲಾ ತರಹದ ಸರಕಾರಿ ಯೋಜನೆಗಳು, ಉದ್ಯೋಗ ವಾರ್ತೆಗಳು ಹಾಗೂ ಇನ್ನಿತರ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಪ್ ಗ್ರೂಪ್ ಸೇರಿಕೊಳ್ಳಿ ಸೇರಲು ಇಲ್ಲಿ ಕ್ಲಿಕ್ ಮಾಡಿ.
ಓದುಗರ ಗಮನಕ್ಕೆ: ನಮ್ಮ ಕನ್ನಡ ನೀಡ್ಸ್ ತಂಡವು ತನ್ನೆಲ್ಲ ಓದುಗರಿಗೆ ನಿಖರವಾದ ಮತ್ತು ಸತ್ಯವಾದ ಮಾಹಿತಿಗಳನ್ನು ಒದಗಿಸುತ್ತದೆ, ಯಾವುದೇ ಸುಳ್ಳು ಅಥವಾ ಅನಧಿಕೃತ ಮಾಹಿತಿಗಳನ್ನು ಒದಗಿಸುವುದಿಲ್ಲ.
ನಮ್ಮ ಕನ್ನಡ ನೀಡ್ಸ್ ವೆಬ್ಸೈಟ್ಗೆ ಯಾವುದೇ ರೀತಿಯ ಸರ್ಕಾರಿ ಸಂಬಂಧವಿಲ್ಲ ಹಾಗೂ ನಮ್ಮ ವೆಬ್ಸೈಟ್ ಯಾವುದೇ ರೀತಿಯ ಸರ್ಕಾರಿ ಪ್ರಚಾರದ ಜಾಲತಾಣವಲ್ಲ.
ನಾವು ಈ ವೆಬ್ಸೈಟ್ ರಚಿಸಿರುವುದರ ಹಿಂದಿನ ಉದ್ದೇಶವೇನೆಂದರೆ, ನಿಮ್ಮಿಂದ ಯಾವುದೇ ರೀತಿಯ ಹಣವನ್ನು ತೆಗೆದುಕೊಳ್ಳುವುದು ಅಲ್ಲ. ನಮ್ಮೆಲ್ಲ ಮಾಹಿತಿಗಳನ್ನು ಓದಲು ನೀವು ಯಾವುದೇ ರೀತಿ ಹಣವನ್ನು ನೀಡಬೇಕಾಗಿಲ್ಲ ಎಲ್ಲಾ ಮಾಹಿತಿಯನ್ನು ನಿಮಗೆ ಉಚಿತವಾಗಿ ತಲುಪಿಸುತ್ತೇವೆ. ನಿಖರವಾದ ಮತ್ತು ಸತ್ಯವಾದ ಮಾಹಿತಿಗಳನ್ನು ಒದಗಿಸುವುದು ನಮ್ಮ ವೆಬ್ಸೈಟ್ನ ಪ್ರಮುಖ ಉದ್ದೇಶವಾಗಿದೆ.