Gruhalakshmi Yojana: ಗೃಹಲಕ್ಷ್ಮಿ ಯೋಜನೆಯ ಹಣ, ಬಿಡುಗಡೆಯ ದಿನಾಂಕ ಪ್ರಕಟಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್!

Gruhalakshmi Yojana: ಗೃಹಲಕ್ಷ್ಮಿ ಯೋಜನೆಯ ಹಣ, ಬಿಡುಗಡೆಯ ದಿನಾಂಕ ಪ್ರಕಟಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್!

ಗೃಹಲಕ್ಷ್ಮಿ ಯೋಜನೆಯ (Gruhalakshmi Yojana) ಹಣ ಬಿಡುಗಡೆಯ ಕುರಿತು ಸಾರ್ವಜನಿಕ ವಲಯದಲ್ಲಿ ಎದ್ದಿರುವ ಗೊಂದಲಕ್ಕೆ ಸೂಕ್ತ ಕಾರಣವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ನಿನ್ನೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಯೋಜನೆಯ ಪ್ರಕಟಣೆಯನ್ನು ತಿಳಿಸಿದ್ದಾರೆ.

ರಾಜ್ಯದ ಎಲ್ಲಾ ಅರ್ಹ ಮಹಿಳಾ ಫಲಾನುಭವಿಗಳಿಗೆ, ಈ ಯೋಜನೆ ಅಡಿಯಲ್ಲಿ ಪ್ರತಿ ತಿಂಗಳು ಅವರ ಬ್ಯಾಂಕ್ ಖಾತೆಗೆ ರೂ.2000 ಹಣ ಜಮಾ ಆಗುತ್ತಿತ್ತು, ಕೆಲ ದಿನಗಳಿಂದ ಎರಡು ತಿಂಗಳ ಹಣವು ಮಹಿಳೆಯರ ಖಾತೆಗೆ ಜಮಾ ಆಗಿಲ್ಲ, ಇದರಿಂದ ರಾಜ್ಯದಲ್ಲೆಡೆ ಯೋಜನೆಯ ಕುರಿತು ಚಿಕ್ಕ ಚಿಕ್ಕ ಗೊಂದಲಗಳು ಎದ್ದಿವೆ, ಇದಕ್ಕೆ ಪ್ರತಿಕ್ರಿಸಿದ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ಯೋಜನೆಯ ಕುರಿತು ಸೂಕ್ತ ಸ್ಪಷ್ಟಣೆಯನ್ನು ನೀಡಿದ್ದಾರೆ.

WhatsApp Group Join Now
Telegram Group Join Now

ಸಾರ್ವಜನಿಕ ವಲಯದಲ್ಲಿ, ಇನ್ನು ಮುಂದೆ ಗ್ಯಾರಂಟಿ ಯೋಜನೆ ಹಣ ಬರುವುದಿಲ್ಲ! ಯೋಜನೆಯ ಸ್ಥಗಿತವಾಗಿದೆ! ಸರ್ಕಾರದ ಬಳಿ ಯಾವುದೇ ಹೆಚ್ಚುವರಿ ಹಣವಿಲ್ಲ! ಎನ್ನುವ ಗೊಂದಲಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟ ಮಾಹಿತಿಯನ್ನು ತಿಳಿಸಿದ್ದಾರೆ.

ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ; 

ಗ್ಯಾರಂಟಿ ಯೋಜನೆಯ ಸ್ಥಗಿತತೆ ಕುರಿತು, ಮಾತನಾಡಿದ ಅವರು ಗೃಹಲಕ್ಷ್ಮಿ ಯೋಜನೆಯ (Gruhalakshmi Yojana) ಜೊತೆಗೆ ಉಳಿದ ನಾಲ್ಕು ಗ್ಯಾರಂಟಿ ಯೋಜನೆಗಳು(Guarantee schemes) ಯಾವುದೇ ಕಾರಣಕ್ಕೂ ಸ್ಥಗಿತ ಆಗುವುದಿಲ್ಲ ಮತ್ತು ಪ್ರತಿ ತಿಂಗಳು(Every Month) ಗೃಹಲಕ್ಷ್ಮಿ ಯೋಜನೆಯ ಮಾಸಿಕ ರೂ.2,000 ಬಿಡುಗಡೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ, ಏಪ್ರಿಲ್ ತಿಂಗಳ ಹಣವು ಮೇ 1 ರಂದು ಜಮಾ ಆಗಿದೆ, ಹಾಗೆಯೇ ಮೇ ಮತ್ತು ಜೂನ್ ತಿಂಗಳ ಹಣವು ಇನ್ನು, ಮುಂದಿನ ಒಂದೆರಡು ದಿನಗಳಲ್ಲಿ ಅರ್ಹ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದು ತಿಳಿಸಿದ್ದಾರೆ.

ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಿರುವ ಸ್ಟೇಟಸ್ ಚೆಕ್ ಮಾಡುವುದು ಹೇಗೆ?

https://play.google.com/store/apps/details?id=com.dbtkarnataka

ಅರ್ಜಿದಾರರು ಮೇಲೆ ನೀಡಲಾದ ಅಧಿಕೃತ ಕರ್ನಾಟಕ(DBT Karnataka) ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಂಡು, ನಿಮ್ಮ ಆಧಾರ್ ಕಾರ್ಡ್ ನಂಬರ್ ಹಾಕಿ, Payment Status ಬಟನ್ ಮೇಲೆ ಕ್ಲಿಕ್ ಮಾಡಿ ಗೃಹಲಕ್ಷ್ಮಿ ಯೋಜನೆಯ ರೂ. 2,000 ಹಣ ಜಮಾ ಆಗಿರುವ ಸ್ಟೇಟಸ್ (Status) ಚೆಕ್ ಮಾಡಿಕೊಳ್ಳಬಹುದು..

ಮೇಲಿನ ವಿಧಾನವನ್ನು ಪಾಲಿಸಲು ಸಾಧ್ಯವಾಗದಿದ್ದಲ್ಲಿ, ನೀವು ಯಾವ ಬ್ಯಾಂಕಿನಲ್ಲಿ ಅಕೌಂಟ್(Bank Account) ಹೊಂದಿರುತ್ತಿರೋ, ಆ ಬ್ಯಾಂಕಿನ ಬ್ಯಾಲೆನ್ಸ್ ಚೆಕ್(Bank Balance Check) ಸಹಾಯವಾಣಿಗೆ ಕರೆ ಮಾಡಿ, ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಿದಿಯೋ? ಇಲ್ಲವೋ? ಎನ್ನುವ ವಿವರಗಳನ್ನು ಪಡೆಯಬಹುದು.

ರಾಜ್ಯದ ಗೃಹಲಕ್ಷ್ಮಿ ಯೋಜನೆಯ ಅರ್ಹ ಫಲಾನುಭವಿಗಳ ಪಟ್ಟಿ ಚೆಕ್ ಮಾಡುವುದು ಹೇಗೆ?

https://ahara.kar.nic.in/Home/EServices

ಅಜಿದಾರರು, ಮೇಲೆ ನೀಡಲಾದ ಆಹಾರ ಇಲಾಖೆಯ ಅಧಿಕೃತ ವೆಬ್ಸೈಟ್ಗ ಭೇಟಿ ನೀಡಿ, “ಪಡಿತರ ಚೀಟಿ” ಬಟನ್ ಅನ್ನು ಕ್ಲಿಕ್ ಮಾಡಿ, ಹಳ್ಳಿಪಟ್ಟಿ ಆಯ್ಕೆಯ ಮೇಲೆ ಕ್ಲಿಕ್ ಮಾಡಬೇಕು.

ನಂತರದ ಪೇಜ್ ನಲ್ಲಿ ನಿಮ್ಮ ಜಿಲ್ಲೆ, ತಾಲೂಕು, ಗ್ರಾಮ ಪಂಚಾಯತ್ ಹಳ್ಳಿಯ ಹೆಸರನ್ನು ಆಯ್ಕೆ ಮಾಡಿಕೊಂಡು “Go” ಬಟನ್ ಅನ್ನು ಕ್ಲಿಕ್ ಮಾಡಿ, ಧ್ರುವ ಲಕ್ಷ್ಮಿ ಯೋಜನೆಯ ಅರ್ಹ ಫಲಾನುಭವಿಗಳ ಪಟ್ಟಿಯನ್ನು ಪಡೆದುಕೊಳ್ಳಬಹುದು.

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು,ಹಾಗೂ ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ಕನ್ನಡ needs WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿ
WhatsApp Group Join Now
Telegram Group Join Now

Leave a Comment