ಭಾರತೀಯ ಹವಾಮಾನ ವರದಿಯ ಪ್ರಕಾರ, ರಾಜ್ಯದಲ್ಲಿ ಎರಡು ದಿನಗಳ ಕಾಲ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ, ಎರಡು ದಿನ ಗುಡುಗು ಸಿಡಿಲಿನ ಕಾರಣಕ್ಕೆ ಯಲ್ಲೋ ಅಲರ್ಟ್(yellow alert) ಘೋಷಣೆ ಮಾಡಲಾಗಿದೆ, ಇನ್ನು ಹೆಚ್ಚಿನ ಮಾಹಿತಿಗೆ ನಮ್ಮ ಟೆಲಿಗ್ರಾಂ ಗ್ರೂಪ್ ಸೇರಿಕೊಳ್ಳಿ, ಸೇರಲು ಇಲ್ಲಿ ಕ್ಲಿಕ್ ಮಾಡಿ.
ಕರ್ನಾಟಕದಲ್ಲಿ ಒಂದು ವಾರದಿಂದಲೂ ವಿವಿಧ ಜಿಲ್ಲೆಯ ಅಲ್ಲಲ್ಲಿ ಮಳೆಯಾಗುತ್ತಲೇ ಇದೆ. ಏಪ್ರಿಲ್ 18 ಮತ್ತು 19ರಂದು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಮಾನ ಇಲಾಖೆಯು (IMD) ನೀಡಿದೆ. ಹಲವು ಜಿಲ್ಲೆಗಳಲ್ಲೂ ಗುಡುಗು ಹಾಗೂ ಸಿಡಿಲಿನ ಸಹಿತ ಮಳೆ ಆಗುವ ಮನುಚ್ಚರಿಕೆಯನ್ನು ಎಲ್ಲೆಡೆ ನೀಡಲಾಗಿದೆ, ಇದೇ ಕಾರಣದಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಎರಡು ದಿನಗಳ ಕಾಲ ಯಲ್ಲೋ ಅಲರ್ಟ್ (yellow alert) ಘೋಷಣೆ ಮಾಡಲಾಗಿದೆ. ಎರಡು ದಿನಗಳ ಕಾಲ ರಾಜ್ಯದಲ್ಲಿ ಗುಡುಗು ಸಹಿತ ಮಳೆ ಇರುವುದರಿಂದ ರಾಜ್ಯದ ಜನತೆಯು ಎಚ್ಚರಿಕೆಯನ್ನು ವಹಿಸಬೇಕು ಎಂದು ಸೂಚನೆಯನ್ನು ನೀಡಿದೆ, ಹೆಚ್ಚಿನ ಮಾಹಿತಿಗೆ ನಮ್ಮ ಟೆಲಿಗ್ರಾಮ ಗ್ರೂಪ್ ಸೇರಿಕೊಳ್ಳಿ, ಸೇರಲು ಇಲ್ಲಿ ಕ್ಲಿಕ್ ಮಾಡಿ.
ರಾಜ್ಯದಲ್ಲಿ ಏಪ್ರಿಲ್ 18 ರಿಂದ 4 ದಿನಗಳ ಕಾಲ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಂದೆರಡು ಕಡೆ ಗುಡುಗು ಸಹಿತ ಮಳೆಯಾಗಲಿದೆ, ಗಾಳಿಯು ಗಂಟೆಗೆ 30-40Km ವೇಗದಲ್ಲಿ ಜೊತೆಗೆ ಮೇಲ್ಮೈ ಮಾರುತಗಳು ಬಲವಾದ ಹಾಗೂ ರಭಸದಿಂದ ಕೂಡಿರುವ ಸಾಧ್ಯತೆ ಇದೆ ಎಂದು ಮುನ್ಸೂಚನೆಯನ್ನು ನೀಡಲಾಗಿದೆ.
ಇದಲ್ಲದೆ ಎಪ್ರಿಲ್ 19 ರಂದು ಕರಾವಳಿಯ ಮೂರು ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳ ಒಂದೆರಡು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ.
ಏಪ್ರಿಲ್ 18 ರಂದು ರಾಜ್ಯದ, ಬೆಳಗಾವಿ, ದಕ್ಷಿಣ ಕನ್ನಡ, ಧಾರವಾಡ, ಹಾವೇರಿ, ಗದಗ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿಕ್ಕಮಂಗಳೂರು, ದಾವಣಗೆರೆ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಶಿವಮೊಗ್ಗ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಕೆಲವು ಕಡೆ ಮಳೆ ಆಗಲಿದೆ.
ಏಪ್ರಿಲ್ 19 ರಂದು ರಾಜ್ಯದ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಚಿಕ್ಕಮಂಗಳೂರು, ದಾವಣಗೆರೆ, ಹಾಸನ, ಕೋಲಾರ, ಕೊಡಗು, ಮೈಸೂರು, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಯ ಕೆಲವು ಕಡೆ ಹಾಗೂ ಗದಗ, ಕಲಬುರಗಿ, ಬೀದರ್, ರಾಯಚೂರು ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಒಂದೆರಡು ಕಡೆ ಮಳೆ ಆಗುವ ನಿರೀಕ್ಷೆ ಇದೆ.
ಏಪ್ರಿಲ್ 20 ರಂದು ರಾಜ್ಯದ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಧಾರವಾಡ, ಕಲಬುರಗಿ, ಕೊಪ್ಪಳ, ಗದಗ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಜಿಲ್ಲೆಗಳಲ್ಲಿ ಒಂದೆರಡು ಕಡೆ ಮಳೆ ಆಗಬಹುದು
ಏಪ್ರಿಲ್ 21 ರಂದು ರಾಜ್ಯದ, ಕಲಬುರಗಿ, ಬೆಳಗಾವಿ, ರಾಯಚೂರು, ಕೊಪ್ಪಳ, ವಿಜಯಪುರ, ಯಾದಗಿರಿ ಹಾಗೂ ಏಪ್ರಿಲ್ 22 ರಂದು ಬೀದರ್, ಬೆಳಗಾವಿ, ಬಾಗಲಕೋಟೆ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆ, ಕೊಪ್ಪಳ, ಹಾಗೂ ಏಪ್ರಿಲ್ 23 ರಂದು ಬೀದರ್, ಬೆಳಗಾವಿ, ಗದಗ, ಬಾಗಲಕೋಟೆ, ರಾಯಚೂರು, ಕಲಬುರಗಿ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಒಂದೆರಡು ಕಡೆ ಮಳೆ ಆಗಬಹುದು ಎಂದು ಅವಮಾನ ಇಲಾಖೆಯು ವರದಿಯನ್ನು ನೀಡಿದೆ, ಹವಾಮಾನ ಇಲಾಖೆಯ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಪಡೆಯಲು ನಮ್ಮ ಟೆಲಿಗ್ರಾಂ ಗ್ರೂಪ್ ಸೇರಿಕೊಳ್ಳಿ, ಸೇರಲು ಇಲ್ಲಿ ಕ್ಲಿಕ್ ಮಾಡಿ.