KPSC RECRUITMENT| ಕೃಷಿ ಇಲಾಖೆಯ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿ 2024

KPSC RECRUITMENT| ಕೃಷಿ ಇಲಾಖೆಯ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿ 2024

ಕರ್ನಾಟಕ ಲೋಕಸೇವಾ ಆಯೋಗದ ಆಧೀನದಲ್ಲಿರುವ, ಕೃಷಿ ಇಲಾಖೆಯ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿ, ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಕೃಷಿ ಅಧಿಕಾರಿ ಹುದ್ದೆಗಳಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆ ಈಗಾಗಲೇ ಬಿಡುಗಡೆಯಾಗಿದೆ, ಆದಿ ಸೂಚನೆಯ ಪ್ರಕಾರ ಶೈಕ್ಷಣಿಕ ಅರ್ಹತೆ, ವಯೋಮಾನ ಪ್ರತಿಯೆ, ವೇತನ ಶ್ರೇಣಿ, ಆಯ್ಕೆ ವಿಧಾನ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗುತ್ತದೆ ಅಭ್ಯರ್ಥಿಗಳು ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಅರ್ಥೈಸಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಒಳ್ಳೆಯದು.

WhatsApp Group Join Now
Telegram Group Join Now

ಹುದ್ದೆಗಳ ವಿವರಗಳು

ಇಲಾಖೆಯ ಹೆಸರು ಕರ್ನಾಟಕ ಲೋಕಸೇವಾ ಆಯೋಗ, ಕೃಷಿ ಇಲಾಖೆ
ಹುದ್ದೆಯ ಹೆಸರು ಕೃಷಿ ಅಧಿಕಾರಿಗಳು ಹಾಗೂ ಸಹಾಯಕ ಕೃಷಿ ಅಧಿಕಾರಿ
ಖಾಲಿ ಇರುವ ಹುದ್ದೆಗಳು 945
ಉದ್ಯೋಗ ಸ್ಥಳ ಕರ್ನಾಟಕ
ವೇತನ ಶ್ರೇಣಿ ನಿಯಮದ ಪ್ರಕಾರ
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್

ಖಾಲಿ ಇರುವ ಹುದ್ದೆಗಳು: ಕರ್ನಾಟಕ ಲೋಕಸೇವಾ ಆಯೋಗದ ಅಧಿಸೂಚನೆಯ ಪ್ರಕಾರ ಕೃಷಿ ಇಲಾಖೆಯಲ್ಲಿ 945 ಕೃಷಿ ಅಧಿಕಾರಿಗಳು ಹಾಗೂ ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳು ಖಾಲಿ ಇವೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಶೈಕ್ಷಣಿಕ ಅರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಅಥವಾ ವಿಶ್ವವಿದ್ಯಾಲಯದಿಂದ ಕೃಷಿ ವಿಷಯದಲ್ಲಿ B.Tech, BSC/ ಬಿ ಎಸ್ಸಿ ಆನರ್ಸ್ ಕೃಷಿ ಪದವಿ ಪಡೆದಿರಬೇಕು.

ವಯೋಮಾನ ಪ್ರಕ್ರಿಯೆ: ಆದಿ ಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಪೂರೈಸಿರಬೇಕು, ಹಾಗೂ ಪ್ರವರ್ಗದ ಆಧಾರದ ಮೇಲೆ ವಯಸ್ಸಿನ ಸಡಿಲಿಕೆಯನ್ನು ಮಾಡಲಾಗಿದೆ.

ವಯಸ್ಸಿನ ಸಡಿಲಿಕೆ:

  • ಸಾಮಾನ್ಯ ಅಭ್ಯರ್ಥಿಗಳಿಗೆ ರೂ.600,
  • ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ ರೂ.300
  • ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50
  • ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡ, ಪ್ರವರ್ಗ -1 ಅಭ್ಯರ್ಥಿಗಳಿಗೆ ಶುಲ್ಕದ ವಿನಾಯಿತಿ ಮಾಡಲಾಗಿದೆ.

ಆತ್ಮೀಯ ಸ್ಪರ್ಧಾರ್ಥಿಗಳೇ ನೀವೇನಾದರೂ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಯಸಿದರೆ ಈಗಿನಿಂದಲೇ ಪರೀಕ್ಷೆಯ ತಯಾರಿಯನ್ನು ನಡೆಸುವುದು ಒಳ್ಳೆಯದು. ಏಕೆಂದರೆ ಪರೀಕ್ಷೆ ಸಮಯದಲ್ಲಿ ಹೆಚ್ಚಿನ ಅಂಕ ಪಡೆದುಕೊಂಡು ಹುದ್ದೆಗಳನ್ನು ಪಡೆಯಲು ಸಹಾಯವಾಗುತ್ತದೆ. ಇಲ್ಲದಿದ್ದಲ್ಲಿ ನೀವು ಸಲ್ಲಿಸಿದ ಅರ್ಜಿಯ ನಮೂನೆಗೆ ಮೌಲ್ಯ ಇಲ್ಲದಂತಾಗುತ್ತದೆ. ಆದ್ದರಿಂದ ಅರ್ಜಿ ಸಲ್ಲಿಸುವ ಎಲ್ಲಾ ಅಭ್ಯರ್ಥಿಗಳು ಸರಿಯಾಗಿ ಅಧ್ಯಯನವನ್ನು ನಡೆಸುವುದು ಒಳ್ಳೆಯದು.

ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತಮ್ಮ ಪ್ರವರ್ಗದ ಆಧಾರದ ಮೇಲೆ ಅರ್ಜಿ ಶುಲ್ಕವನ್ನು ಪಾವತಿಸಬೇಕು.

  • ಸಾಮಾನ್ಯ ಅಭ್ಯರ್ಥಿಗಳಿಗೆ 38 ವರ್ಷ,
  • ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ 41 ವರ್ಷ,
  • ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡ, ಪ್ರವರ್ಗ -1 ಅಭ್ಯರ್ಥಿಗಳಿಗೆ 43 ವರ್ಷಗಳ ಕಾಲ ವಯಸ್ಸಿನ ಸಡಿಲಿಕೆಯನ್ನು ಮಾಡಲಾಗಿದೆ.

ಅರ್ಜಿ ಸಲ್ಲಿಸುವಿಕೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಆರಂಭವಾದ ದಿನಾಂಕ 7 ಅಕ್ಟೋಬರ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 7 ನವೆಂಬರ್ 2024

 

ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು, ನಾವು ಕೆಳಗಡೆ ನೀಡಿರುವ ಎಲ್ಲಾ ನಿಯಮಗಳನ್ನು ಸರಿಯಾಗಿ ಪಾಲಿಸುವ ಮುಖಾಂತರ ಅಭ್ಯರ್ಥಿಯು ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬಹುದು ವಿವರಗಳು ಕೆಳಗಿನಂತಿವೆ.

ಅಭ್ಯರ್ಥಿಯು ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು, ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ದಿನಾಂಕವು 07 ಅಕ್ಟೋಬರ್ 2024 ರಿಂದ ಆರಂಭವಾಗಿ 07 ನವೆಂಬರ್ 2024ರ ವರೆಗೆ ಚಾಲ್ತಿಯಲ್ಲಿ ಇರುತ್ತದೆ.

ಅಭ್ಯರ್ಥಿಯು ಅರ್ಜಿಯನ್ನು ಕೊನೆಯ ದಿನಾಂಕದೊಳಗೆ ಸಲ್ಲಿಸಬೇಕು ನಂತರ ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.

ಅಭ್ಯರ್ಥಿಯ ಅರ್ಜಿ ಸಲ್ಲಿಸುವಾಗ ಅಧಿಕೃತ ವೆಬ್ ಸೈಟ್ ಇಲ್ಲವೇ ಕೆಳಗಡೆ ನೀಡಿರುವ ಅರ್ಜಿ ಸಲ್ಲಿಸುವ ಲಿಂಕ್ ಕ್ಲಿಕ್ ಮಾಡುವ ಮುಖಾಂತರ ಅಧಿಕೃತ ಪೇಜ್ ಗೆ ಭೇಟಿ ನೀಡಿ

ನಂತರ ಅರ್ಜಿ ನಮೂನೆಯಲ್ಲಿ ಕೇಳಲಾಗುವ ಎಲ್ಲಾ ದಾಖಲಾತಿಗಳನ್ನು ಸರಿಪಡಿಸಿಕೊಂಡು ಇಟ್ಟುಕೊಳ್ಳಬೇಕು.

ದಾಖಲಾತಿಗಳನ್ನು ಸರಿಪಡಿಸಿಕೊಂಡ ನಂತರ ಎಲ್ಲ ಮಾಹಿತಿಯನ್ನು ಲಗತ್ತಿಸಬೇಕು.

ಭರ್ತಿ ಮಾಡಿದ ಎಲ್ಲಾ ದಾಖಲಾತಿಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.

ದಾಖಲಾತಿಗಳ ಜೊತೆಗೆ ಅಭ್ಯರ್ಥಿಯ ಸಹಿ, ಭಾವಚಿತ್ರ ಹಾಗೂ ಹೆಬ್ಬೆರಳಿನ thumb ಅನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.(ಅಗತ್ಯವಿದ್ದರೆ ಮಾತ್ರ)

ಎಲ್ಲಾ ದಾಖಲಾತಿಗಳನ್ನು ಭರ್ತಿ ಮಾಡಿದ ನಂತರ ಪುನಃ ಮಾಹಿತಿಯನ್ನು ಪರಿಶೀಲಿಸಿ, ತಪ್ಪಿದ್ದಲ್ಲಿ ಸರಿಪಡಿಸಬೇಕು.

ನಂತರ ಸಲ್ಲಿಸು ಬಟನ್ ಮೇಲೆ ಕ್ಲಿಕ್ ಮಾಡುವ ಮುಖಾಂತರ, ನಿಮ್ಮ ಅರ್ಜಿ ನಮೂನೆಯನ್ನು ಪೂರ್ಣಗೊಳಿಸಬಹುದು.

ಅಭ್ಯರ್ಥಿಯು ಅರ್ಜಿಯನ್ನು 7 ನವೆಂಬರ್ 2024 ರ ಒಳಗೆ ಸಲ್ಲಿಸಬೇಕು.

ನಂತರ ಅರ್ಜಿ ಸಲ್ಲಿಸಿದ ಪ್ರತಿಯನ್ನು ಡೌನ್ಲೋಡ್ ಮಾಡಿಕೊಂಡು ಇಟ್ಟುಕೊಳ್ಳಿ.

ಪರೀಕ್ಷೆ ಸಮಯದಲ್ಲಿ ಡೌನ್ಲೋಡ್ ಮಾಡಿಕೊಂಡು ಅರ್ಜಿ ಪ್ರತಿಯು ಅಗತ್ಯವಿರುತ್ತದೆ.

ಆಯ್ಕೆಯ ವಿಧಾನ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲು ಲಿಖಿತ ಪರೀಕ್ಷೆಯನ್ನು ನಡೆಸಿ ನಂತರ ಸಂದರ್ಶನ ಮಾಡುವ ಮುಖಾಂತರ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ವೇತನ ಶ್ರೇಣಿ: ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ, ಕೃಷಿ ಅಧಿಕಾರಿಗಳಿಗೆ ರೂ. 43100 ರಿಂದ 83,900 ರವರಿಗೆ ವೇತನವನ್ನು ನೀಡಲಾಗುತ್ತದೆ. ಮತ್ತು ಸಹಾಯಕ ಕೃಷಿ ಅಧಿಕಾರಿಗಳಿಗೆ ರೂ.40,900 ರಿಂದ 78,200 ರವರಿಗೆ ವೇತನವನ್ನು ನೀಡಲಾಗುತ್ತದೆ.

ಪ್ರಮುಖ ಲಿಂಕ್ ಗಳು 

ಅಧಿಕೃತ ವೆಬ್ಸೈಟ್ raitamitra.karnataka.gov.in
ಅಧಿಕೃತ ಅಧಿಸೂಚನೆ(HK) ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಆದಿ ಸೂಚನೆ(NHK) ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸುವ ಲಿಂಕ ಇಲ್ಲಿ ಕ್ಲಿಕ್ ಮಾಡಿ

ಹೆಚ್ಚಿನ ಉದ್ಯೋಗ ವಾರ್ತೆಗಳು

ಓದುಗರ ಗಮನಕ್ಕೆ: ನಮ್ಮ ಕನ್ನಡ ನೀಡ್ಸ್ ತಂಡವು ತನ್ನೆಲ್ಲ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಒದಗಿಸುತ್ತದೆ ಯಾವುದೇ ಸುಳ್ಳು ಅಥವಾ ಅನಧಿಕೃತ ಮಾಹಿತಿಗಳನ್ನು ಒದಗಿಸುವುದಿಲ್ಲ.

ನಮ್ಮ ವೆಬ್ ಸೈಟ್ ಗೆ ಯಾವುದೇ ರೀತಿಯ ಸರ್ಕಾರಿ ಸಂಬಂಧ ಹೊಂದಿಲ್ಲ, ಹಾಗೂ ನಮ್ಮ ವೆಬ್ಸೈಟ್ ಯಾವುದೇ ರೀತಿಯ ಸರ್ಕಾರಿ ಪ್ರಚಾರದ ಜಾಲತಾಣವಲ್ಲ.

ನಾವು ಈ ಬ್ಲಾಗ್ ಮಾಡಿರುವ ಉದ್ದೇಶ ನಿಮ್ಮಿಂದ ಯಾವುದೇ ರೀತಿ ಹಣವನ್ನು ಪಡೆಯುವುದು ಅಲ್ಲ. ನಮ್ಮೆಲ್ಲ ಮಾಹಿತಿಗಳನ್ನು ಓದಲು ನೀವು ಯಾವುದೇ ರೀತಿಯ ಹಣವನ್ನು ಪಾವತಿಸಬೇಕಾಗಿಲ್ಲ. ಎಲ್ಲಾ ಮಾಹಿತಿಯು ನಿಮಗೆ ಉಚಿತವಾಗಿ ದೊರೆಯುತ್ತದೆ. ನಿಖರವಾದ ಅಥವಾ ಸತ್ಯವಾದ ಮಾಹಿತಿಗಳನ್ನು ಒದಗಿಸುವುದು ನಮ್ಮ ಬ್ಲಾಗ್ ನ ಪ್ರಮುಖ ಉದ್ದೇಶವಾಗಿದೆ.

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು,ಹಾಗೂ ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ಕನ್ನಡ needs WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿ
WhatsApp Group Join Now
Telegram Group Join Now

Leave a Comment