Land Surveyors Recruitment| ಭೂಮಾಪನ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024.

ಕನ್ನಡ ನೀಡ್ಸ್ ಓದುಗರಿಗೆ ಎಲ್ಲರಿಗೂ ನಮಸ್ಕಾರ. ಇಂದಿನ ವರದಿಯ ಮುಖ್ಯಾಂಶವೇನೆಂದರೆ, ಭೂಮಾಪನ ಇಲಾಖೆಯಲ್ಲಿ ಹಲವು ಹುದ್ದೆಗಳು ಖಾಲಿ ಇದ್ದು ನೇಮಕಾತಿಯಾಗಿ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ. ಆಸಕ್ತಿ ಇರುವ ಅರ್ಹತೆಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಉಚಿತ ಉದ್ಯೋಗ ವಾರ್ತೆಗಳನ್ನು ಪಡೆಯಲು ನಮ್ಮನ್ನು ಫಾಲೋ ಮಾಡಿ.

ಭೂಮಾಪನ ಇಲಾಖೆಯ ನೇಮಕಾತಿಗೆ ( Land Surveyors Recruitment)ಸಂಬಂಧಿಸಿದ ಅಧಿಕೃತ ಅಧಿಸೂಚನೆಯೂ ಈಗಾಗಲೇ ಬಿಡುಗಡೆಯಾಗಿದೆ.ಈ ಹುದ್ದೆಗಳ ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಅದಿಸೂಚನೆಯನ್ನು ಸರಿಯಾಗಿ ಓದಿ ಅರ್ಥೈಸಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವುದು ಒಳ್ಳೆಯದು.

ಭೂಮಾಪನ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವಯೋಮಾನ ಪ್ರಕ್ರಿಯೆ, ಅರ್ಜಿ ಶುಲ್ಕದ ವಿವರ, ಅರ್ಜಿ ಸಲ್ಲಿಸುವಿಕೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು, ಆಯ್ಕೆ ವಿಧಾನ, ವೇತನ ಶ್ರೇಣಿ ಹಾಗೂ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಗಳನ್ನು ಈ ಲೇಖನದಲ್ಲಿ ವಿವರಿಸಲಾಗುತ್ತದೆ. ಅಭ್ಯರ್ಥಿಗಳು ಮಾಹಿತಿಗಳನ್ನು ಸರಿಯಾಗಿ ಓದಿ ಅರ್ಥೈಸಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ. ಮಾಹಿತಿಯು ಕೆಳಗಿನಂತಿವೆ.

WhatsApp Group Join Now
Telegram Group Join Now

ಹುದ್ದೆಗಳಿಗೆ ಸಂಬಂಧಿಸಿದ ವಿವರಗಳು:

  • ಇಲಾಖೆಯ ಹೆಸರು: ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆ
  • ಉದ್ಯೋಗ ಸ್ಥಳ: ಕರ್ನಾಟಕದಾದ್ಯಂತ
  • ವೇತನ ಶ್ರೇಣಿ: ಅಧಿಸೂಚನೆಯ ಪ್ರಕಾರ
  • ಹುದ್ದೆಯ ಹೆಸರು: ಭೂಮಾಪಕರು (ಗ್ರೂಪ್ ಸಿ)
  • ಖಾಲಿ ಇರುವ ಹುದ್ದೆಗಳು: 364
  • ಅರ್ಜಿ ಸಲ್ಲಿಸುವ ಬಗೆ: ಆನ್ಲೈನ್ ಮುಖಾಂತರ

ಖಾಲಿ ಇರುವ ಹುದ್ದೆಗಳು:

ಭೂಮಾಪನ ಇಲಾಖೆಯ  ಅಧಿಸೂಚನೆಯ ಪ್ರಕಾರ ಒಟ್ಟು 364 ಭೂಮಾಪಕರು (ಗ್ರೂಪ್ ಸಿ) ಹುದ್ದೆಗಳು ಖಾಲಿ ಇದೆ .ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಶೈಕ್ಷಣಿಕ ಅರ್ಹತೆ: 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಅಧಿಕೃತ ಅಧಿಸೂಚನೆಯ ಪ್ರಕಾರ ಮಾನ್ಯತೆ ಪಡೆದ ಸಂಸ್ಥೆಯಿಂದ ಅಥವಾ ವಿಶ್ವವಿದ್ಯಾಲಯದಿಂದ ITI,12th, ಡಿಪ್ಲೋಮಾ, ಬಿಇ ಅಥವಾ ಬಿ.ಟೆಕ್ ನಲ್ಲಿ ಸಿವಿಲ್ ಇಂಜಿನಿಯರಿಂಗ್ ಪದವಿಯನ್ನು ಪೂರ್ಣಗೊಳಿಸಬೇಕು.

ವಯಸ್ಸಿನ ಪ್ರಕ್ರಿಯೆ:

ಭೂಮಾಪನ ಇಲಾಖೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಹಾಗೂ ಗರಿಷ್ಠವಾಗಿ 35 ವರ್ಷ ವಯೋಮಿತಿಯನ್ನು ಮೀರಿರಬಾರದು.

ಪ್ರವರ್ಗದ ಆಧಾರದ ಮೇಲೆ ವಯಸ್ಸಿನ ಸಡಿಲಿಕೆಯನ್ನು ಮಾಡಲಾಗಿದೆ. ವಿವರಗಳು ಕೆಳಗಿನಂತಿವೆ;

  • ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 03 ವರ್ಷಗಳ ಕಾಲ.
  • ಪರಿಶಿಷ್ಟ /ಜಾತಿ ಪರಿಶಿಷ್ಟ, ಪಂಗಡ ಪ್ರವರ್ಗ-1 ಅಭ್ಯರ್ಥಿಗಳಿಗೆ 05 ವರ್ಷ.
  • ಪಿಡಬ್ಲ್ಯೂಡಿ (PWD)ಅಭ್ಯರ್ಥಿಗಳಿಗೆ 10 ವರ್ಷಗಳ ಕಾಲ ವಹಿಸಿನ ಸಡಿಲಿಕೆಯನ್ನು ಮಾಡಲಾಗಿದೆ.

ಅರ್ಜಿ ಶುಲ್ಕದ ವಿವರ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತಮ್ಮ ಪ್ರವರ್ಗದ ಆಧಾರದ ಮೇಲೆ ಅರ್ಜಿ ಶುಲ್ಕವನ್ನು ಪಾವತಿಸಬೇಕು. ಮಾಹಿತಿಯು ಕೆಳಗಿನಂತಿವೆ;

  • ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50/-
  • ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ರೂ.300/-
  • ಸಾಮಾನ್ಯ ಅಭ್ಯರ್ಥಿಗಳಿಗೆ ರೂ 600/-
  • SC/ ST /ಪ್ರವರ್ಗ-1, ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗಿಲ್ಲ.
  • ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಆನ್ಲೈನ್ ಮುಖಾಂತರ ಪಾವತಿಸಬೇಕು.

ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೆಳಗಿನ ಸೂಚನೆಗಳನ್ನು ಪಾಲಿಸುವ ಮುಖಾಂತರ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

  • ಅಭ್ಯರ್ಥಿಯು ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿ ಅರ್ಥೈಸಿಕೊಂಡು, ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವುದು ಒಳ್ಳೆಯದು.
  • 11 ಮಾರ್ಚ್ 2024 ರಿಂದ ಆರಂಭವಾಗಿ 10 ಏಪ್ರಿಲ್ 2024 ಕ್ಕೆ ಕೊನೆಗೊಳ್ಳುತ್ತದೆ.
  • ಅಭ್ಯರ್ಥಿಗಳು ಅರ್ಜಿಯನ್ನು ಕೊನೆಯ ದಿನಾಂಕದೊಳಗೆ ಸಲ್ಲಿಸಬೇಕು ನಂತರ ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.
  • ಅರ್ಜಿ ಸಲ್ಲಿಸುವಾಗ ಅಧಿಕೃತ ವೆಬ್ಸೈಟ್ ಇಲ್ಲವೇ ಕೆಳಗಡೆ ನೀಡಿರುವ ಅರ್ಜಿ ಸಲ್ಲಿಸುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ನಂತರ ಅಧಿಕೃತ ಪೇಜ್ ತೆರೆದುಕೊಳ್ಳುತ್ತದೆ.
  • ಅಧಿಕೃತ ಪೇಜ್ ನ, ಅರ್ಜಿ ನಮೂನೆಯಲ್ಲಿ ಕೇಳಲಾಗುವ ಎಲ್ಲಾ ದಾಖಲಾತಿಗಳನ್ನು ಸರಿಪಡಿಸಿಕೊಂಡು ಇಟ್ಟುಕೊಳ್ಳಬೇಕು.
  • ನಂತರ ಕೇಳಲಾಗುವ ಎಲ್ಲಾ ದಾಖಲಾತಿಗಳನ್ನು ಭರ್ತಿ ಮಾಡಿ.
  • ಭರ್ತಿ ಮಾಡಿದ ದಾಖಲಾತಿಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
  • ದಾಖಲಾತಿಗಳ ಜೊತೆಗೆ ಅಭ್ಯರ್ಥಿಯ ಭಾವಚಿತ್ರ, ಸಹಿ, ಹೆಬ್ಬೆರಳಿನ tumbh ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
  • ದಾಖಲಾತಿಗಳನ್ನು ಭರ್ತಿ ಮಾಡಿದ ನಂತರ ಅರ್ಜಿ ನಮೂನೆಯನ್ನು ಪುನಃ ಪರಿಶೀಲಿಸಿ, ತಪ್ಪಿದ್ದಲ್ಲಿ ಸರಿಪಡಿಸಿ.
  • ಕೊನೆಯಲ್ಲಿ ಸಲ್ಲಿಸು ಬಟನ್ ಮೇಲೆ ಕ್ಲಿಕ್ ಮಾಡುವ ಮುಖಾಂತರ ನಿಮ್ಮ ಅರ್ಜಿ ನಮೂನೆಯನ್ನು ಪೂರ್ಣಗೊಳಿಸಬಹುದು.
  • ಅರ್ಜಿಯನ್ನು 10 ಏಪ್ರಿಲ್ 2024ರ ಒಳಗೆ ಸಲ್ಲಿಸಬೇಕು ನಂತರ ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.
  • ನಂತರ ಭರ್ತಿ ಮಾಡಿದ ಅರ್ಜಿಯ ಪ್ರತಿಯನ್ನು ಡೌನ್ಲೋಡ್ ಮಾಡಿಕೊಂಡು ಇಟ್ಟುಕೊಳ್ಳಿ. ಪರೀಕ್ಷೆ ಸಮಯದಲ್ಲಿ ಉಪಯೋಗವಾಗುತ್ತದೆ.

ಅಭ್ಯರ್ಥಿಗಳು ಮೇಲಿನ ಹಂತಗಳನ್ನು ಪಾಲಿಸುವ ಮುಖಾಂತರ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಆತ್ಮೀಯ ಸ್ಪರ್ಧಾರ್ಥಿಗಳೇ, ನೀವೇನಾದರೂ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಯಸಿದರೆ ಈಗಿನಿಂದಲೇ ಅಧ್ಯಯನವನ್ನು ನಡೆಸುವುದು ಒಳ್ಳೆಯದು. ಏಕೆಂದರೆ ಪರೀಕ್ಷೆ ಸಮಯದಲ್ಲಿ ಹೆಚ್ಚಿನ ಅಂಕಗಳನ್ನು ಪಡೆದುಕೊಂಡು ಹುದ್ದೆಗಳನ್ನು ಪಡೆಯಲು ಸಹಕಾರಿಯಾಗುತ್ತದೆ. ಇಲ್ಲದಿದ್ದಲ್ಲಿ ನೀವು ಸಲ್ಲಿಸಿದ ಅರ್ಜಿಯ ನಮೂನೆಗೆ ಮೌಲ್ಯ ಇಲ್ಲದಂತಾಗುತ್ತದೆ. ಆದ್ದರಿಂದ ಅರ್ಜಿ ಸಲ್ಲಿಸುವ ಎಲ್ಲಾ ಅಭ್ಯರ್ಥಿಗಳು ಸರಿಯಾದ ಅಧ್ಯಯನ ನಡೆಸಿ ಒಳ್ಳೆಯ ಅಂಕಗಳನ್ನು ಪಡೆದುಕೊಳ್ಳಿ.

ಅರ್ಜಿ ಸಲ್ಲಿಸುವಿಕೆಗೆ ಸಂಬಂಧಿಸಿದ ಪ್ರಮುಖ  ದಿನಾಂಕಗಳು:

  • ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕ: 11 ಮಾರ್ಚ್ 2024.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10 ಏಪ್ರಿಲ್ 2024.

ಆಯ್ಕೆಯ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಎಲ್ಲಾ ಅಭ್ಯರ್ಥಿಗಳಿಗೆ ಮೊದಲು ಕಡ್ಡಾಯ ಕನ್ನಡ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದ ಅಭ್ಯರ್ಥಿಗಳಿಗೆ ಸಂದರ್ಶನ ಮಾಡುವ ಮುಖಾಂತರ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ವೇತನ ಶ್ರೇಣಿ:

ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ರೂ. 23,500 ರಿಂದ 47,650 ರವರೆಗೆ ವೇತನವನ್ನು ನೀಡಲಾಗುತ್ತದೆ.

ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ಲಿಂಕ್ ಗಳು:

ಉತ್ತಮ ಮಾಹಿತಿಯನ್ನು ಹೊಂದಿದ ಲೇಖನವನ್ನು ನಿಮ್ಮ ಸ್ನೇಹಿತರಿಗೆ ಹಾಗೂ ಬಂಧುಗಳೆಲ್ಲರಿಗೂ ಶೇರ್ ಮಾಡಿ. ಲೇಖನವನ್ನು ಓದಿದ ಎಲ್ಲರಿಗೂ ಧನ್ಯವಾದಗಳು.

ಪ್ರತಿ ದಿನ ನಮ್ಮ ವಾಹಿನಿಯಲ್ಲಿ ಪ್ರಸಾರವಾಗುವ ಎಲ್ಲಾ ತರಹದ ಸರ್ಕಾರಿ ಯೋಜನೆಗಳು ಉದ್ಯೋಗ ವಾರ್ತೆಗಳು ಹಾಗೂ ಇನ್ನಿತರ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿಗಳನ್ನು ಪಡೆಯಲು ನಮ್ಮ ಗ್ರೂಪ್ ಸೇರಿಕೊಳ್ಳಿ. ಸೇರಲು ಇಲ್ಲಿ ಕ್ಲಿಕ್ ಮಾಡಿ.

ಓದುಗರ ಗಮನಕ್ಕೆ: ನಮ್ಮ ಕನ್ನಡ ನ್ಯೂಸ್ ತಂಡವು ತನ್ನೆಲ್ಲ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಒದಗಿಸುತ್ತದೆ ಯಾವುದೇ ಸುಳ್ಳು ಅಥವಾ ಅನಧಿಕೃತ ಮಾಹಿತಿಗಳನ್ನು ಒದಗಿಸುವುದಿಲ್ಲ.

ನಮ್ಮ ವೆಬ್ಸೈಟ್ ಗೆ ಯಾವುದೇ ರೀತಿಯ ಸರ್ಕಾರಿ ಸಂಬಂಧ ಹೊಂದಿಲ್ಲ ಹಾಗೂ ನಮ್ಮ ವೆಬ್ಸೈಟ್ ಯಾವುದೇ ತರಹದ ಸರ್ಕಾರಿ ಪ್ರಚಾರದ ಜಾಲತಾಣವಲ್ಲ.

ನಾವು ಈ ವೆಬ್ಸೈಟ್ ಮಾಡಿರುವ ಉದ್ದೇಶ ನಿಮ್ಮಿಂದ ಯಾವುದೇ ರೀತಿ ಹಣವನ್ನು ಪಡೆಯುವುದು ಅಲ್ಲ. ನಮ್ಮೆಲ್ಲ ಮಾಹಿತಿಗಳನ್ನು ಓದಲು ನೀವು ಯಾವುದೇ ರೀತಿ ಹಣವನ್ನು ಪಾವತಿಸಬೇಕಾಗಿಲ್ಲ. ಎಲ್ಲಾ ಮಾಹಿತಿ ನಿಮಗೆ ಉಚಿತವಾಗಿ ದೊರೆಯುತ್ತದೆ. ನಿಖರವಾದ ಮಾಹಿತಿಗಳನ್ನು ಒದಗಿಸುವುದು ನಮ್ಮ ವೆಬ್ಸೈಟ ನ ಪ್ರಮುಖ ಉದ್ದೇಶವಾಗಿದೆ.

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು,ಹಾಗೂ ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ಕನ್ನಡ needs WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿ
WhatsApp Group Join Now
Telegram Group Join Now

Leave a Comment