PDO RECRUITMENT| ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆ ನೇಮಕಾತಿ 2024

PDO RECRUITMENT| ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆ ನೇಮಕಾತಿ 2024

ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹೊರಡಿಸಿದ, ಅದಿ ಸೂಚನೆಯ ಪ್ರಕಾರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಹುದ್ದೆಗಳು ಖಾಲಿ ಇದ್ದು ನೇಮಕಾತಿಗಾಗಿ ಅರ್ಜಿಯನ್ನು ಅವ್ವನ ಮಾಡಲಾಗಿದೆ ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ(PDO) ಹುದ್ದೆಗಳಿಗೆ ಸಂಬಂಧಿಸಿದ ಅಧಿಕೃತ ಅದಿಸೂಚನೆಯೂ ಈಗಾಗಲೇ ಬಿಡುಗಡೆಯಾಗಿದೆ, ಅದಿಸೂಚನೆಯ ಪ್ರಕಾರ ಶೈಕ್ಷಣಿಕ ಅರ್ಹತೆ, ವೇತನ ಶ್ರೇಣಿ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಸುವ ವಿಧಾನ, ಆಯ್ಕೆಯ ವಿಧಾನ ಉದ್ಯೋಗ ಸ್ಥಳ, ಅರ್ಜಿ ಸಲ್ಲಿಸುವ ದಿನಾಂಕ ಹಾಗೂ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗುತ್ತದೆ ಅಭ್ಯರ್ಥಿಗಳು ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಅರ್ಥೈಸಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ.

WhatsApp Group Join Now
Telegram Group Join Now

ಹುದ್ದೆಗಳಿಗೆ ಸಂಬಂಧಿಸಿದ ವಿವರಗಳು

ಇಲಾಖೆಯ ಹೆಸರು ಕರ್ನಾಟಕ ಲೋಕಸೇವಾ ಆಯೋಗ (KPSC)
ಹುದ್ದೆಯ ಹೆಸರು ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO)
ಉದ್ಯೋಗ ಸಂಸ್ಥೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ (RDPR)
ಖಾಲಿ ಇರುವ ಹುದ್ದೆಗಳು 247
ಉದ್ಯೋಗ ಸ್ಥಳ ಕರ್ನಾಟಕ
ವೇತನ ಶ್ರೇಣಿ ಅಧಿಸೂಚನೆಯ ಪ್ರಕಾರ
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್

ಖಾಲಿ ಇರುವ ಹುದ್ದೆಗಳು: ಕರ್ನಾಟಕ ಲೋಕಸೇವಾ ಆಯೋಗ ಆಡಿಸಿದ ಅಧಿಸೂಚನೆಯ, ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಒಟ್ಟು 247 ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO )ಹುದ್ದೆಗಳು ಖಾಲಿ ಇವೆ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ವಿವರಗಳು; 

  • ಪಂಚಾಯತ್ ಅಭಿವೃದ್ಧಿ ಅಧಿಕಾರಿ (Non HK) : 150
  • ಪಂಚಾಯತ್ ಅಭಿವೃದ್ಧಿ ಅಧಿಕಾರಿ (HK) :97

ಶೈಕ್ಷಣಿಕ ಅರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆಯ ಪ್ರಕಾರ ಮಾನ್ಯತೆ ಪಡೆದ ಸಂಸ್ಥೆಯಿಂದ ಅಥವಾ ವಿಶ್ವವಿದ್ಯಾಲಯದಿಂದ ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು.

ವಯೋಮಾನ ಪ್ರಕ್ರಿಯೆ: ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠವಾಗಿ 38 ವರ್ಷ ವಯೋಮಿತಿಯನ್ನು ಮೀರಿರಬಾರದು, ಜೊತೆಗೆ ಪ್ರವರ್ಗದ ಆಧಾರದ ಮೇಲೆ ವಹಿಸಿದೆ ಸಡಿಲಿಕೆಯನ್ನು ಮಾಡಲಾಗಿದೆ.

ವಯಸ್ಸಿನ ಸಡಿಲಿಕೆ;

  • ಪ್ರವರ್ಗ-1, ಎಫ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ 43 ವರ್ಷ,
  • ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 41 ವರ್ಷಗಳ ಕಾಲ ವಯಸ್ಸಿನ ಸಡಿಲಿಕೆಯನ್ನು ಮಾಡಲಾಗಿದೆ.

ಅರ್ಜಿ ಸಲ್ಲಿಸುವಿಕೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಆರಂಭವಾದ ದಿನಾಂಕ 18 ಸಪ್ಟೆಂಬರ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 03 ಅಕ್ಟೋಬರ್ 2024

ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತಮ್ಮ ಪ್ರವರ್ಗದ ಆಧಾರದ ಮೇಲೆ ಅರ್ಜಿ ಶುಲ್ಕವನ್ನು ಪಾವತಿಸಬೇಕು.

  • ಸಾಮಾನ್ಯವಾಗಿ ವರ್ಗದ ಅಭ್ಯರ್ಥಿಗಳು ರೂ.600
  • ಹಿಂದುಳಿದ ವರ್ಗದ ಅಭ್ಯರ್ಥಿಗಳು ರೂ.300
  • ಮಾಜಿ ಸೈನಿಕ ಅಭ್ಯರ್ಥಿಗಳು ರೂ.50 ಅರ್ಜಿ ಶುಲ್ಕವನ್ನು ಪಾವತಿಸಬೇಕು.
  • ಪ್ರವರ್ಗ-1, ಎಸ್ ಸಿ, ಎಸ್ ಟಿ ಅಭ್ಯರ್ಥಿಗಳಿಗೆ ಶುಲ್ಕದ ವಿನಾಯಿತಿ ಮಾಡಲಾಗಿದೆ.
  • ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಸಲ್ಲಿಸಬೇಕು.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೆಳಗೆ ನೀಡಿರುವ ಎಲ್ಲಾ ಸೂಚನೆಗಳನ್ನು ಪಾಲಿಸುವ ಮುಖಾಂತರ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು ವಿವರಗಳು ಕೆಳಗಿನಂತಿವೆ;

  • ಅಭ್ಯರ್ಥಿಯು ಅರ್ಜಿ ಸಲ್ಲಿಸುವ ಮೊದಲು, ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿ ಅರ್ಥೈಸಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವುದು ಒಳ್ಳೆಯದು.
  • ಅರ್ಜಿ ಸಲ್ಲಿಸುವ ದಿನಾಂಕ 18 ಸಪ್ಟೆಂಬರ್ 2024 ರಿಂದ ಆರಂಭವಾಗಿ 3 ಅಕ್ಟೋಬರ್ 2024 ವರೆಗೆ ಚಾಲ್ತಿಯಲ್ಲಿ ಇರುತ್ತದೆ.
  • ಅಭ್ಯರ್ಥಿಗಳು ಅರ್ಜಿಯನ್ನು ಕೊನೆಯ ದಿನಾಂಕದ ಒಳಗೆ ಸಲ್ಲಿಸಬೇಕು ನಂತರ ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.
  • ಅಭ್ಯರ್ಥಿ ಅರ್ಜಿ ಸಲ್ಲಿಸುವಾಗ ಅಧಿಕೃತ ಲಿಂಕ್ ಇಲ್ಲವೇ ಕೆಳಗಡೆ ನೀಡಿರುವ ಅರ್ಜಿ ಸಲ್ಲಿಸುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ನಂತರ ಅಧಿಕೃತ ಪೇಜ್ ತೆರೆದುಕೊಳ್ಳುತ್ತದೆ.
  • ಪೇಜ್ ನ ಅರ್ಜಿ ನಮೂನೆಯಲ್ಲಿ ಕೇಳಲಾಗುವ ಎಲ್ಲ ದಾಖಲಾತಿಗಳನ್ನು ಸರಿಪಡಿಸಿಕೊಂಡು ಇಟ್ಟುಕೊಳ್ಳಬೇಕು.
  • ಅರ್ಜಿ ಸಲ್ಲಿಸುವಾಗ ಸರಿಪಡಿಸಿಕೊಂಡ ಎಲ್ಲಾ ದಾಖಲಾತಿಗಳನ್ನು ಭರ್ತಿ ಮಾಡಿ.
  • ಭರ್ತಿ ಮಾಡಿದ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
  • ದಾಖಲಾತಿಗಳ ಜೊತೆಗೆ ಅಭ್ಯರ್ಥಿಯ ಸಹಿ, ಭಾವಚಿತ್ರ, ಹೆಬ್ಬೆರಳಿನ THUMB ಅನ್ನು ಕೂಡ ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
  • ಎಲ್ಲಾ ದಾಖಲೆಗಳನ್ನು ಭರ್ತಿ ಮಾಡಿದ ನಂತರ ಅರ್ಜಿನ ನಮೂನೆಯನ್ನು ಒಮ್ಮೆ ಪರಿಶೀಲಿಸಿ ಏನಾದರೂ ತಪ್ಪಿದ್ದಲ್ಲಿ ಸರಿಪಡಿಸಿ.
  • ಕೊನೆಯಲ್ಲಿ ಸಲ್ಲಿಸು ಬಟನ್ ಮೇಲೆ ಕ್ಲಿಕ್ ಮಾಡುವ ಮುಖಾಂತರ ನಿಮ್ಮ ಅರ್ಜಿ ನಮೂನೆಯನ್ನು ಪೂರ್ಣಗೊಳಿಸಬಹುದು.
  • ಅಭ್ಯರ್ಥಿ ಅರ್ಜಿಯನ್ನು 03 ಅಕ್ಟೋಬರ್ 2024ರ ಒಳಗೆ ಸಲ್ಲಿಸಬೇಕು ನಂತರ ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.
  • ಭರ್ತಿ ಮಾಡಿದ ಅರ್ಜಿಯ ಪ್ರತಿಯನ್ನು ಡೌನ್ಲೋಡ್ ಮಾಡಿಕೊಂಡು ಇಟ್ಟುಕೊಳ್ಳಿ. ಪರೀಕ್ಷೆಯ ಸಮಯದಲ್ಲಿ ಅದು ಸಹಾಯವಾಗುತ್ತದೆ.

ಆತ್ಮೀಯ ಸ್ಪರ್ಧಾರ್ಥಿಗಳೆ, ನೀವೇನಾದರೂ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಯಸಿದರೆ ಈಗಿನಿಂದಲೇ ಸರಿಯಾದ ಅಧ್ಯಯನವನ್ನು ನಡೆಸುವುದು. ಒಳ್ಳೆಯದು ಏಕೆಂದರೆ ಪರಿಚಯ ಸಮಯದಲ್ಲಿ ಹೆಚ್ಚಿನ ಅಂಕಗಳನ್ನು ಪಡೆದುಕೊಂಡು ಹುದ್ದೆಗಳನ್ನು ಪಡೆಯಲು ಸಹಾಯವಾಗುತ್ತದೆ ಇಲ್ಲದಿದ್ದಲ್ಲಿ ನೀವು ಸಲ್ಲಿಸಿದ ಅರ್ಜಿ ನಮೂನೆಗೆ ಯಾವುದೇ ಮೌಲ್ಯ ಇಲ್ಲದಂತಾಗುತ್ತದೆ. ಆದ್ದರಿಂದ ಅರ್ಜಿ ಸಲ್ಲಿಸುವ ಎಲ್ಲಾ ಅಭ್ಯರ್ಥಿಗಳು ಸರಿಯಾಗಿ ಅಧ್ಯಯನ ನಡೆಸಿ ಪರೀಕ್ಷೆ ಕೇಂದ್ರಕ್ಕೆ ಹಾಜರಾಗಿ, ಒಳ್ಳೆಯ ಅಂಕಗಳನ್ನು ಪಡೆದುಕೊಳ್ಳಿ.

ಆಯ್ಕೆಯ ವಿಧಾನ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕರ್ನಾಟಕ ಲೋಕಸೇವಾ ಆಯೋಗವು ಕನ್ನಡ ಭಾಷಾ ಪರೀಕ್ಷಾ ಸ್ಪರ್ಧಾತ್ಮಕ ಪರೀಕ್ಷೆ ನಡೆಸುವ ಮುಖಾಂತರ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ವೇತನ ಶ್ರೇಣಿ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅಧಿಸೂಚನೆಯ ಪ್ರಕಾರ ಮಾಸಿಕವಾಗಿ ರೂ.37,900 ರಿಂದ 70,850 ರವರಿಗೆ ವೇತನವನ್ನು ನೀಡಲಾಗುತ್ತದೆ.

ಪ್ರಮುಖ ಲಿಂಕ್ ಗಳು:

ಅಧಿಕೃತ ವೆಬ್ಸೈಟ್ kpsc.kar.nic.in
ಅಧಿಕೃತ ಆದಿ ಸೂಚನೆ(Non HK) Download Now
ಅಧಿಕೃತ ಆದಿ ಸೂಚನೆ (HK) Download Now
ಅರ್ಜಿ ಸಲ್ಲಿಸುವ ಲಿಂಕ್ Click Here

ಓದುಗರ ಗಮನಕ್ಕೆ: ನಮ್ಮ ಸಿಹಿವಾಣಿ ತಂಡವು ತನ್ನೆಲ್ಲ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಒದಗಿಸುತ್ತದೆ ಯಾವುದೇ ಸುಳ್ಳು ಅಥವಾ ಅನಧಿಕೃತ ಮಾಹಿತಿಗಳನ್ನು ಒದಗಿಸುವುದಿಲ್ಲ.

ಕನ್ನಡ ನೀಡ್ಸ್ ವೆಬ್ ಸೈಟ್ ಗೆ ಯಾವುದೇ ರೀತಿಯ ಸರ್ಕಾರಿ ಸಂಬಂಧವಿಲ್ಲ, ಹಾಗೂ ನಮ್ಮ ವೆಬ್ಸೈಟ್ ಯಾವುದೇ ತರಹದ ಸರ್ಕಾರಿ ಪ್ರಚಾರದ ಜಾಲತಾಣವಲ್ಲ.

ನಾವು ಈ ವೆಬ್ಸೈಟ್ ರಚಿಸಿರುವುದರ ಹಿಂದಿನ ಉದ್ದೇಶವೇನೆಂದರೆ, ನಿಮ್ಮಿಂದ ಯಾವುದೇ ರೀತಿಯ ಹಣವನ್ನು ಪಡೆಯುವುದು ಅಲ್ಲ. ನಮ್ಮ ಎಲ್ಲಾ ಸುದ್ದಿಗಳನ್ನು ಓದಲು ನೀವು ಯಾವುದೇ ರೀತಿ ಹಣವನ್ನು ಪಾವತಿಸಬೇಕಾಗಿಲ್ಲ. ಎಲ್ಲ ಮಾಹಿತಿಯು ನಿಮಗೆ ಉಚಿತವಾಗಿ ದೊರೆಯುತ್ತದೆ. ನಿಖರವಾದ ಅಥವಾ ಸತ್ಯವಾದ ಮಾಹಿತಿಗಳನ್ನು ಒದಗಿಸುವುದೇ ನಮ್ಮ ವೆಬ್ ಸೈಟ್ ನ ಪ್ರಮುಖ ಉದ್ದೇಶವಾಗಿದೆ.

ಇದನ್ನು ಓದಿ;

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು,ಹಾಗೂ ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ಕನ್ನಡ needs WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿ
WhatsApp Group Join Now
Telegram Group Join Now

Leave a Comment