ಸ್ಟಾಪ್ ಸೆಲೆಕ್ಷನ್ ಕಮಿಷನ್ ನೇಮಕಾತಿ 2024:
ಕನ್ನಡ ನೀಡ್ಸ್ ಓದುಗರಿಗೆ ಎಲ್ಲರಿಗೂ ನಮಸ್ಕಾರ. ಇಂದಿನ ವರದಿಯ ಮುಖ್ಯ ಅಂಶವೇನೆಂದರೆ ಸ್ಟಾಫ್ ಸೆಲೆಕ್ಷನ್ ಕಮಿಷನ್(SSC)ನಲ್ಲಿ ಖಾಲಿಯಿರುವ ಸಬ್ ಇನ್ಸ್ಪೆಕ್ಟರ್(Sub-inspector)ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ. ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಪ್ರತಿದಿನ ಇದೇ ತರಹದ ಉಚಿತ ಉದ್ಯೋಗ ವಾರ್ತೆಗಳನ್ನು ಪಡೆಯಲು ನಮ್ಮ ಪೇಜ್ ಫಾಲೋ ಮಾಡಿಕೊಳ್ಳಿ.
ಸ್ಟಾಪ್ ಸೆಲೆಕ್ಷನ್ ಕಮಿಷನ್(SSC )ಹುದ್ದೆಗಳಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆಯೂ ಈಗಾಗಲೇ ಬಿಡುಗಡೆಯಾಗಿದೆ. ಈ ಹುದ್ದೆಗಳ ಬಗ್ಗೆ ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ಅರ್ಥೈಸಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವುದು ಒಳ್ಳೆಯದು.
ಈ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವಯೋಮಾನ ಪ್ರಕ್ರಿಯೆ, ವೇತನ ಶ್ರೇಣಿ, ಅರ್ಜಿ ಶುಲ್ಕದ ವಿವರಗಳು, ಅರ್ಜಿ ಸಲ್ಲಿಸುವಿಕೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು, ಆಯ್ಕೆಯ ವಿಧಾನ ಹಾಗೂ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಗಳನ್ನು ಈ ಲೇಖನದಲ್ಲಿ ವಿವರಿಸಲಾಗುತ್ತದೆ ಅಭ್ಯರ್ಥಿಗಳು ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಅರ್ಥೈಸಿಕೊಂಡು ನಂತರ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿ.
ಹುದ್ದೆಗಳಿಗೆ ಸಂಬಂಧಿಸಿದ ವಿವರಗಳು:
- ಇಲಾಖೆಯ ಹೆಸರು: ಸ್ಟಾಪ್ ಸೆಲೆಕ್ಷನ್ ಕಮಿಷನ್ (SSC)
- ಖಾಲಿ ಇರುವ ಹುದ್ದೆಗಳು: 4187
- ಉದ್ಯೋಗ ಸ್ಥಳ: ಭಾರತದಾದ್ಯಂತ
- ಹುದ್ದೆಯ ಹೆಸರು: ಸಬ್ ಇನ್ಸ್ಪೆಕ್ಟರ್.(Sub- inspector)
- ವೇತನ ಶ್ರೇಣಿ: ಅಧಿಸೂಚನೆಯ ಪ್ರಕಾರ.
- ಅರ್ಜಿ ಸಲ್ಲಿಸುವ ಬಗೆ: ಆನ್ಲೈನ್ ಮುಖಾಂತರ
ಖಾಲಿ ಇರುವ ಹುದ್ದೆಗಳು:
ಅಧಿಕೃತ ಅಧಿಸೂಚನೆಯ ಪ್ರಕಾರ ಒಟ್ಟು 4187 ಸಬ್ ಇನ್ಸ್ಪೆಕ್ಟರ್ ಹುದ್ದೆಗಳು ಖಾಲಿ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರಗಳು ಕೆಳಗಿನಂತಿವೆ;
- CISF ಹುದ್ದೆಗಳು: 1597
- BSF ಹುದ್ದೆಗಳು: 892
- CRPF ಹುದ್ದೆಗಳು : 1172
- ITBP ಹುದ್ದೆಗಳು : 278
- ದೆಹಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಪುರುಷರು: 125
- ದೆಹಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮಹಿಳಾ: 61
- SSB ಹುದ್ದೆಗಳು: 62
ಶೈಕ್ಷಣಿಕ ಅರ್ಹತೆ:
ಸ್ಟಾಪ್ ಸೆಲೆಕ್ಷನ್ ಕಮಿಷನ್ ಅಧಿಕೃತ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮಾನ್ಯತೆ ಪಡೆದ ಸಂಸ್ಥೆಯಿಂದ ಅಥವಾ ವಿಶ್ವವಿದ್ಯಾಲಯದಿಂದ ಯಾವುದೇ ಪದವಿಯನ್ನು ಪಡೆದಿರಬೇಕು.
ವಯೋಮಾನ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಅಧಿಕೃತ ಅಧಿಸೂಚನೆಯ ಪ್ರಕಾರ ಕನಿಷ್ಠ 20 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠವಾಗಿ 25 ವರ್ಷ ವಯೋಮಿತಿಯನ್ನು ಮೀರಿರಬಾರದು.
ಪ್ರವರ್ಗದ ಆಧಾರದ ಮೇಲೆ ವಯಸ್ಸಿನ ಸಲ್ಲಿಕೆಯನ್ನು ಮಾಡಲಾಗಿದೆ ವಿವರಗಳು ಕೆಳಗಿನಂತಿವೆ.
- ಓಬಿಸಿ (OBC) ಅಭ್ಯರ್ಥಿಗಳಿಗೆ 3 ವರ್ಷ,
- ಎಸ್ಸಿ /ಎಸ್ಟಿ ಅಭ್ಯರ್ಥಿಗಳಿಗೆ 05 ವರ್ಷ,
- PWD (ಸಾಮಾನ್ಯ) ಅಭ್ಯರ್ಥಿಗಳಿಗೆ 10 ವರ್ಷ,
- PWD (OBC) ಅಭ್ಯರ್ಥಿಗಳಿಗೆ 13 ವರ್ಷ,
- PWD(SC /ST)ಅಭ್ಯರ್ಥಿಗಳಿಗೆ 15 ವರ್ಷಗಳ ಕಾಲ ವಯಸ್ಸಿನ ಸಡಿಲಿಕೆಯನ್ನು ಮಾಡಲಾಗಿದೆ.
ಅರ್ಜಿ ಶುಲ್ಕದ ವಿವರಗಳು:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತಮ್ಮ ಪ್ರವರ್ಗದ ಆಧಾರದ ಮೇಲೆ ಅರ್ಜಿ ಶುಲ್ಕವನ್ನು ಪಾವತಿಸಬೇಕು. ಮಾಹಿತಿಯು ಕೆಳಗಿನಂತಿವೆ.
- ಸಾಮಾನ್ಯ /ಓಬಿಸಿ /EWS ಅಭ್ಯರ್ಥಿಗಳು 100 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು.
- ಎಸ್ಸಿ /ಎಸ್ಟಿ ಅಭ್ಯರ್ಥಿಗಳಿಗೆ ಶುಲ್ಕದ ವಿನಾಯಿತಿಯನ್ನು ಮಾಡಲಾಗಿದೆ.
- ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಆನ್ಲೈನ್ ಮುಖಾಂತರ ಪಾವತಿಸಬೇಕು.
ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೆಳಗಿನ ಸೂಚನೆಯನ್ನು ಪಾಲಿಸುವ ಮುಖಾಂತರ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಮಾಹಿತಿಯು ಕೆಳಗಿನಂತಿವೆ.
- ಅಭ್ಯರ್ಥಿಯು ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿ ಅರ್ಥೈಸಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವುದು ಒಳ್ಳೆಯದು.
- ಅರ್ಜಿ ಸಲ್ಲಿಸುವ ದಿನಾಂಕ 4 ಮಾರ್ಚ್ 2024 ರಿಂದ ಆರಂಭವಾಗಿ 28 ಮಾರ್ಚ್ 2024 ರವರೆಗೆ ಚಾಲ್ತಿಯಲ್ಲಿ ಇರುತ್ತದೆ
- ಅಭ್ಯರ್ಥಿಯು ಅರ್ಜಿಯನ್ನು ಮೇಲೆ ಕಾಣಿಸಿದ ದಿನಾಂಕದ ಒಳಗೆ ಸಲ್ಲಿಸಬೇಕು ನಂತರ ಸಲ್ಲಿಸಿದ ಪರಿಗಣಿಸಲಾಗುವುದಿಲ್ಲ.
- ಅಭ್ಯರ್ಥಿಯು ಅರ್ಜಿ ಸಲ್ಲಿಸುವ ಅಧಿಕೃತ ವೆಬ್ಸೈಟ್ ಇಲ್ಲವೇ ಅರ್ಜಿ ಸಲ್ಲಿಸುವ ಲಿಂಕ್ ಮೇಲೆ ಕ್ಲಿಕ್ ಮಾಡಿ, ಅಧಿಕೃತ ಪೇಜ್ ತೆರೆದುಕೊಳ್ಳುತ್ತದೆ.
- ನಂತರ ಅರ್ಜಿ ನಮೂನೆಯಲ್ಲಿ ಕೇಳಲಾಗಿರುವ ಎಲ್ಲಾ ದಾಖಲಾತಿಗಳನ್ನು ಸರಿಪಡಿಸಿಕೊಂಡು ಇಟ್ಟುಕೊಳ್ಳಬೇಕು.
- ಸರಿಪಡಿಸಿಕೊಂಡ ದಾಖಲಾತಿಗಳನ್ನು ಅರ್ಜಿ ನಮೂನೆಯಲ್ಲಿ ಭರ್ತಿ ಮಾಡಬೇಕು.
- ಭರ್ತಿ ಮಾಡಿದ ದಾಖಲಾತಿಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
- ದಾಖಲಾತಿಗಳ ಜೊತೆಗೆ ಅಭ್ಯರ್ಥಿಯ ಭಾವಚಿತ್ರ, ಸಹಿ, ಹೆಬ್ಬೆರಳಿನ THUMB ಅನ್ನು ಕೂಡ ಸ್ಕ್ಯಾನ್ ಮಾಡಿ, ಅಪ್ಲೋಡ್ ಮಾಡಬೇಕು.
- ಭರ್ತಿ ಮಾಡಿದ ಎಲ್ಲಾ ದಾಖಲಾತಿಗಳು ಸರಿಯಾಗಿದೆಯಾ ಎಂದು ಒಮ್ಮೆ ಪರಿಶೀಲಿಸಿ, ತಪ್ಪಿದ್ದರೆ ಸರಿಪಡಿಸಬೇಕು.
- ನಂತರ ನಿಮ್ಮ ಪ್ರವರ್ಗದ ಆಧಾರದ ಮೇಲೆ ಅರ್ಜಿ ಶುಲ್ಕವನ್ನು ಪಾವತಿಸಿ, (ಅನ್ವಯಿಸಿದರೆ ಮಾತ್ರ).
- ಕೊನೆಯಲ್ಲಿ ಸಲ್ಲಿಸು ಬಟನ್ ಮೇಲೆ ಕ್ಲಿಕ್ ಮಾಡುವ ಮುಖಾಂತರ ನಿಮ್ಮ ಅರ್ಜಿ ನಮೂನೆಯನ್ನು ಪೂರ್ಣಗೊಳಿಸಬಹುದು.
- ಅಭ್ಯರ್ಥಿಯು ಅರ್ಜಿಯನ್ನು 28 ಮಾರ್ಚ್ 2024 ರ ಒಳಗೆ ಸಲ್ಲಿಸಬೇಕು ನಂತರ ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.
- ನಂತರ ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಇಟ್ಟುಕೊಳ್ಳಿ
- ಪರೀಕ್ಷೆಯ ಸಮಯದಲ್ಲಿ ಡೌನ್ಲೋಡ್ ಮಾಡಿಕೊಂಡ ಪ್ರತಿಯು ಬೇಕಾಗುತ್ತದೆ.
ಆತ್ಮೀಯ ಸ್ಪರ್ಧಾರ್ಥಿಗಳೇ ನೀವೇನಾದರೂ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸ ಬಯಸಿದರೆ ಈಗಿನಿಂದಲೇ ಅಧ್ಯಯನವನ್ನು ನಡೆಸುವುದು ಒಳ್ಳೆಯದು. ಏಕೆಂದರೆ ಪರೀಕ್ಷೆಯ ಸಮಯದಲ್ಲಿ ಹೆಚ್ಚಿನ ಅಂಕಗಳನ್ನು ಪಡೆದುಕೊಂಡು ಹುದ್ದೆಗಳನ್ನು ಪಡೆಯಲು ಸಹಕಾರಿಯಾಗುತ್ತದೆ.ಇಲ್ಲದಿದ್ದಲ್ಲಿ ನೀವು ಸಲ್ಲಿಸಿದ ಅರ್ಜಿ ನಮೋನೆಗೆ ಮೌಲ್ಯ ಇಲ್ಲದಂತಾಗುತ್ತದೆ. ಆದ್ದರಿಂದ ಅರ್ಜಿ ಸಲ್ಲಿಸುವ ಎಲ್ಲಾ ಅಭ್ಯರ್ಥಿಗಳು ಸರಿಯಾಗಿ ಅಧ್ಯಯನ ನಡೆಸಿ ಪರೀಕ್ಷಾ ಕೇಂದ್ರಕ್ಕೆ ತೆರಳಿ, ಒಳ್ಳೆಯ ಅಂಕಗಳನ್ನು ಪಡೆದುಕೊಂಡು ಹುದ್ದೆಗಳನ್ನು ಪಡೆದುಕೊಳ್ಳಿ.
ಅರ್ಜಿ ಸಲ್ಲಿಸುವಿಕೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕ: 4 ಮಾರ್ಚ್ 2024.
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28 ಮಾರ್ಚ 2024.
- ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 29 ಮಾರ್ಚ್ 2024.
ಆಯ್ಕೆಯ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಎಲ್ಲಾ ಅಭ್ಯರ್ಥಿಗಳಿಗೆ ಮೊದಲು ಕಂಪ್ಯೂಟರ್ ಆಧಾರಿತ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದ ಅಭ್ಯರ್ಥಿಗಳಿಗೆ ದೈಹಿಕ ಪರೀಕ್ಷೆ ನಡೆಸಲಾಗುತ್ತದೆ. ಮೇಲಿನ ಎರಡು ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ನೀಡಿದ ದಾಖಲೆಗಳನ್ನು ಪರಿಶೀಲನೆ ಮಾಡಿ ವೈದ್ಯಕೀಯ ಪರೀಕ್ಷೆಯನ್ನು ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ವೇತನ ಶ್ರೇಣಿ:
ಸ್ಟಾಪ್ ಸೆಲೆಕ್ಷನ್ ಕಮಿಷನ್ (SSC) ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ರೂಪಾಯಿ. 35,400 ರಿಂದ 1,12,400 ವರೆಗೆ ವೇತನವನ್ನು ನೀಡಲಾಗುತ್ತದೆ.
ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ಲಿಂಕ್ ಗಳು:
- ಅಧಿಕೃತ ವೆಬ್ಸೈಟ್: ssc.nic.in
- ಅಧಿಕೃತ ಅಧಿಸೂಚನೆ: ಇಲ್ಲಿ ಕ್ಲಿಕ್ ಮಾಡಿ.
- ಅರ್ಜಿ ಸಲ್ಲಿಸುವ ಲಿಂಕ್: ಇಲ್ಲಿ ಕ್ಲಿಕ್ ಮಾಡಿ.
- ಅಭ್ಯರ್ಥಿಯ ನೋಂದಣಿಗಾಗಿ: ಇಲ್ಲಿ ಕ್ಲಿಕ್ ಮಾಡಿ.
ಉತ್ತಮ ಮಾಹಿತಿಯನ್ನು ಹೊಂದಿದ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ. ಲೇಖನವನ್ನು ಓದಿದ ಎಲ್ಲರಿಗೂ ಧನ್ಯವಾದಗಳು. ಪ್ರತಿದಿನ ನಮ್ಮ ವಾಹಿನಿಯಲ್ಲಿ ಪ್ರಸಾರವಾಗುವ ಎಲ್ಲಾ ತರಹದ ಸರ್ಕಾರಿ ಯೋಜನೆಗಳು ಉದ್ಯೋಗ ವಾರ್ತೆಗಳು ಹಾಗೂ ಇನ್ನಿತರ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿಗಳನ್ನು ಪಡೆಯಲು ನಮ್ಮ ವ್ಯಾಟ್ಸಪ್ ಗ್ರೂಪ್ ಸೇರಿಕೊಳ್ಳಿ. ಸೇರಲು ಇಲ್ಲಿ ಕ್ಲಿಕ್ ಮಾಡಿ.
ಓದುಗರ ಗಮನಕ್ಕೆ: ನಮ್ಮ ಕನ್ನಡ ನೀಡ್ಸ್ ತಂಡವು ತನ್ನೆಲ್ಲ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಯನ್ನು ಒದಗಿಸುತ್ತದೆ. ಯಾವುದೆ ಸುಳ್ಳು ಅಥವಾ ಅನಧಿಕೃತ ಮಾಹಿತಿಗಳನ್ನು ಒದಗಿಸುವುದಿಲ್ಲ.
ಕನ್ನಡ ನೀಡ್ಸ್ ವೆಬ್ ಸೈಟ್ ಗೆ ಯಾವುದೇ ರೀತಿಯ ಸರ್ಕಾರಿ ಸಂಬಂಧವಿಲ್ಲ, ಹಾಗೂ ನಮ್ಮ ವೆಬ್ಸೈಟ್ ಯಾವುದೇ ತರಹದ ಸರ್ಕಾರಿ ಪ್ರಚಾರದ ಜಾಲತಾಣವಲ್ಲ.
ನಾವು ಈ ವೆಬ್ಸೈಟ್ ರಚಿಸಿರುವುದರ ಹಿಂದಿನ ಉದ್ದೇಶವೇನೆಂದರೆ, ನಿಮ್ಮಿಂದ ಯಾವುದೇ ರೀತಿಯ ಹಣವನ್ನು ಪಡೆಯುವುದು ಅಲ್ಲ. ನಮ್ಮ ಎಲ್ಲಾ ಸುದ್ದಿಗಳನ್ನು ಓದಲು ನೀವು ಯಾವುದೇ ರೀತಿ ಹಣವನ್ನು ಪಾವತಿಸಬೇಕಾಗಿಲ್ಲ. ಎಲ್ಲ ಮಾಹಿತಿಯು ನಿಮಗೆ ಉಚಿತವಾಗಿ ದೊರೆಯುತ್ತದೆ. ನಿಖರವಾದ ಅಥವಾ ಸತ್ಯವಾದ ಮಾಹಿತಿಗಳನ್ನು ಒದಗಿಸುವುದೇ ನಮ್ಮ ವೆಬ್ ಸೈಟ್ ನ ಪ್ರಮುಖ ಉದ್ದೇಶವಾಗಿದೆ.