Vidyadhan Karnataka Scholarship 2024: 10ನೇ ತರಗತಿ ಪಾಸಾದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ

SSLC ತರಗತಿಯನ್ನು ಪಾಸಾದ ವಿದ್ಯಾರ್ಥಿಗಳು ತಮ್ಮ ಮುಂದಿನ ವಿದ್ಯಾಭ್ಯಾಸವನ್ನು ಯಾವುದೇ ಆರ್ಥಿಕ ಕೊರತೆಯಿಂದ ಮುಂದುವರಿಸಲು ಸರೋಜಿನಿ ದಾಮೋದರನ್ ಫೌಂಡೇಶನ್ ವತಿಯಿಂದ ವಿದ್ಯಾಧನ್ (Vidyadhan Karnataka Scholarship) ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ, ಈ ವಿದ್ಯಾರ್ಥಿ ವೇತನಕ್ಕೆ ಹೇಗೆ ಅರ್ಜಿ ಸಲ್ಲಿಸಬೇಕು? ಹಾಗೂ ವಿದ್ಯಾರ್ಥಿ ವೇತನ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗುತ್ತದೆ ಮಾಹಿತಿಯನ್ನು ಸಂಪೂರ್ಣವಾಗಿ ಓದಿ, ಶಿಕ್ಷಣಕ್ಕೆ ಸಂಬಂಧಿಸಿದ ಹಾಗೆ ಇನ್ನು ಹೆಚ್ಚಿನ ಮಾಹಿತಿ ಪಡೆಯಲು ನಮ್ಮ ಅಧಿಕೃತ ಟೆಲಿಗ್ರಾಂ ಗ್ರೂಪ್ ಸೇರಿಕೊಳ್ಳಿ, ಸೇರಲು ಇಲ್ಲಿ ಕ್ಲಿಕ್ ಮಾಡಿ.

Vidyadhan Karnataka Scholarship 2024

ಈ ವಿದ್ಯಾರ್ಥಿ ವೇತನ ವಿದ್ಯಾರ್ಥಿಗಳ ಶೈಕ್ಷಣಿಕ ಭರವಸೆ ಮತ್ತು ಆರ್ಥಿಕವಾಗಿ ಕಡಿಮೆ ಸವಲತ್ತನ್ನು ಹೊಂದಿರುವ ವಿದ್ಯಾರ್ಥಿಗಳಿಗೆ ಬೆಂಬಲವನ್ನು ಸೂಚಿಸುವುದಾಗಿದೆ, ಈ ವಿದ್ಯಾರ್ಥಿ ವೇತನಕ್ಕೆ ರಾಜ್ಯದಿಂದ ಯಾವುದೇ ಮಾನ್ಯತೆ ಪಡೆದ ಶಾಲೆಯಿಂದ 2023 ನೇ ಸಾಲಿನ ಹತ್ತನೇ ತರಗತಿಯಲ್ಲಿ ತೇರ್ಗಡೆ ಹೊಂದಿರಬೇಕು, ಹಾಗೂ ಪ್ರಥಮ ಪಿಯುಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿರಬೇಕು.

WhatsApp Group Join Now
Telegram Group Join Now

ಈಗಿನ ಪ್ರಥಮ ಪಿಯುಸಿ ಅಥವಾ ದ್ವಿತೀಯ ಪಿಯುಸಿ ಓದುತ್ತಿರುವ ವಿದ್ಯಾರ್ಥಿಗಳ ಮುಂದಿನ ಶಿಕ್ಷಣವನ್ನು ಮುಂದುವರಿಸಲು ಸಲುವಾಗಿ ಸರೋಜಿನಿ ದಾಮೋದರನ್ ಫೌಂಡೇಶನ್ ವತಿಯಿಂದ ವಿದ್ಯಾಧನ್ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ.

ವಿದ್ಯಾರ್ಥಿ ವೇತನದಿಂದ ನೀಡುವ ಮೊತ್ತ;

ಸರೋಜಿನಿ ದಾಮೋದರ ಫೌಂಡೇಶನ್ ವತಿಯಿಂದ ರೂ.10,000 ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು:

  • ವಿದ್ಯಾರ್ಥಿಯು ಕರ್ನಾಟಕದ ಪ್ರಜೆಯಾಗಿರಬೇಕು.
  • 2023 ನೇ ಸಾಲಿನ ಹತ್ತನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
  • ವಿದ್ಯಾರ್ಥಿಯು SSLC ಯಲ್ಲಿ 90% ಅಥವಾ 9CGPA ಅಂಕವನ್ನು ಪಡೆದಿರಬೇಕು (ಗಮನಿಸಿ: ಅಂಗವಿಕಲ ಅಭ್ಯರ್ಥಿಗಳಿಗೆ ಕಟ್ ಆಫ್ ಮಾರ್ಕ್ಸ್ 75% ಅಥವಾ 7.5CGPA ಆಗಿರಬೇಕು)
  • ವಿದ್ಯಾರ್ಥಿಯ ಕುಟುಂಬದ ಆದಾಯವು ರೂ.2,00,000 ಲಕ್ಷಕ್ಕಿಂತ ಕಡಿಮೆ ಇರಬೇಕು.

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು

  • SSLC ಅಂಕಪಟ್ಟಿ
  • ವಿದ್ಯಾರ್ಥಿಯ ಭಾವಚಿತ್ರ
  • ಅಂಗವಿಕಲ ವಿದ್ಯಾರ್ಥಿಗಳ ಅಂಗವೈಕಲಿಯ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ವಿದ್ಯಾರ್ಥಿ ಹೆಸರಿನ ಇಮೇಲ್ ಐಡಿ

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?

ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ 30 ಜೂನ್ 2024ರ ಒಳಗಾಗಿ ಅರ್ಜಿಯನ್ನು ಸಲ್ಲಿಸಬೇಕು, ವಿದ್ಯಾರ್ಥಿಗಳು ಅರ್ಜಿಯನ್ನು vidyadhan.org ವೆಬ್‌ಸೈಟ್‌ ಅಥವಾ SDF VIDYA ಮೊಬೈಲ್ ಅಪ್ಲಿಕೇಶನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ;

ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಿರುವ ಇಮೇಲ್ ಐಡಿ ಅಥವಾ ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಬಹುದು.

vidyadhan.karnataka@sdfoundationindia.com ಗೆ ಮೇಲ್ ಅಥವಾ 9663517131

ಪ್ರಮುಖ ಲಿಂಕ್ ಗಳು

ಅಧಿಕೃತ ವೆಬ್ಸೈಟ್ vidyadhan.org
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ.

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು,ಹಾಗೂ ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ಕನ್ನಡ needs WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿ
WhatsApp Group Join Now
Telegram Group Join Now

Leave a Comment